ಉಳ್ಳಾಲ: ಬಸ್ಸು ಮಾಲಕರ ಒಕ್ಕೂಟದ ವತಿಯಿಂದ ಸ್ಪೀಕರ್ ಯು.ಟಿ. ಖಾದರ್ ಗೆ ಸನ್ಮಾನ
ಮಂಗಳೂರು ಪೂರ್ವ ವಲಯ ಬಸ್ಸು ಮಾಲಕರ ಒಕ್ಕೂಟದ ವತಿಯಿಂದ ಕರ್ನಾಟಕ ವಿಧಾನ ಸಭಾಧ್ಯಕ್ಷ ಯು. ಟಿ ಖಾದರ್ ವರವರಿಗೆ ಸನ್ಮಾನಿಸಲಾಯಿತು.
ಪೂರ್ವ ವಲಯ ಬಸ್ಸು ಮಾಲಕರ ಒಕ್ಕೂಟದ ಅಧ್ಯಕ್ಷ ಅಝೀಝ್ ಪರ್ತಿಪ್ಪಾಡಿ ಮಾತನಾಡಿ, ಯು.ಟಿ ಖಾದರ್ ರವರು ಸರ್ವ ಧರ್ಮಿಯರಿಗೆ ಪ್ರೀತಿಪಾತ್ರರಾಗಿದ್ದು. ಸರ್ವರ ಮನ ಗೆಲುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಹೇಳಿದರು.
ಪೂರ್ವ ವಲಯ ಬಸ್ಸು ಮಾಲಕರ ಒಕ್ಕೂಟದ ಗೌರವಾಧ್ಯಕ್ಷ ಹಾಜಿ ಎನ್.ಎಸ್ ಕರೀಂ, ಉಪಾಧ್ಯಕ್ಷ ಶಬರೀಶ್ ಶೆಟ್ಟಿ, ಕೋಶಾಧಿಕಾರಿ ಮಜಿದ್ ಸಾಥ್ ಕೋ, ಕಾರ್ಯದರ್ಶಿ ಅನಿಶ್ ವಿ ಶೆಟ್ಟಿ ಉಪಸ್ಥಿತರಿದ್ದರು.