ಉಳ್ಳಾಲ: ಸೆ.29ಕ್ಕೆ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ-2023

ಉಳ್ಳಾಲ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ ಸೆ.29ರಂದು ಮಂಗಳೂರು ವಿಶ್ವ ವಿದ್ಯಾನಿಲಯದ ಮಂಗಳ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ರವಿ ವೈ ನಾಯಕ್ ಅವರು ಹೇಳಿದರು.

ಉಳ್ಳಾಲ ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ದಕ್ಷಿಣ ಕನ್ನಡ, ತಾಲ್ಲೂಕು ಪಂಚಾಯತ್ ಉಳ್ಳಾಲ , ಉಳ್ಳಾಲ ನಗರ ಸಭೆ, ದೈಹಿಕ ಶಿಕ್ಷಣ ವಿಭಾಗ ಮಂಗಳೂರು ವಿಶ್ವ ವಿದ್ಯಾನಿಲಯ, ಉಳ್ಳಾಲ ತಾಲೂಕು ವಾಲಿಬಾಲ್ ಅಶೋಸಿಯೇಷನ್, ಜೆಸಿಐ ಮಂಗಳಗಂಗೋತ್ರಿ ಕೊಣಾಜೆ, ಇವುಗಳ ಸಹಯೋಗದೊಂದಿಗೆ ನಡೆಯುವ ದಸರಾ ಕ್ರೀಡಾಕೂಟ ಮಹಿಳೆಯರಿಗೆ ಮತ್ತು ಪುರುಷರಿಗೆ ಪ್ರತ್ಯೇಕ ವಿಭಾಗದಲ್ಲಿ ನಡೆಯಲಿದ್ದು,

ದಸರಾ ಕ್ರೀಡಾಕೂಟದ ಅಧ್ಯಕ್ಷತೆಯನ್ನು ಕರ್ನಾಟಕ ಸರಕಾರದ ವಿಧಾನ ಸಭಾ ಅಧ್ಯಕ್ಷರು ಮಾನ್ಯ ಯು ಟಿ ಖಾದರ್ ಅವರು ವಹಿಸುವರು. ಮತ್ತು ಜಿಲ್ಲೆಯ ಜನಪ್ರತಿನಿಧಿಗಳು, ಅಧಿಕಾರಿಗಳು, ಸಂಘ ಸಂಸ್ಥಯ ಪ್ರಮುಖರು ಉಪಸ್ಥಿತರಿರುವರು ಎಂದರು.ಸಾರ್ವಜನಿಕರಿಗೆ ಮುಕ್ತ ಅವಕಾಶ.

ಸುದ್ದಿಗೋಷ್ಠಿಯಲ್ಲಿ ಉಳ್ಳಾಲ ತಾಲೂಕು ಕಾರ್ಯನಿರ್ವಹಣಾ ಅಧಿಕಾರಿ ಶೈಲಾ ಕಾರಜಗಿ, ಉಳ್ಳಾಲ ನಗರ ಸಭಾ ಕಂದಾಯ ಅಧಿಕಾರಿ ನವೀನ್ ಹೆಗ್ಡೆ, ತಾಲೂಕು ದಸರಾ ಕ್ರೀಡಾಕೂಟ ನೋಡಲ್ ಅಧಿಕಾರಿ ತ್ಯಾಗಮ್ ಹರೇಕಳ ಉಪಸ್ಥಿತರಿದ್ದರು.

Related Posts

Leave a Reply

Your email address will not be published.