HomeFresh Newsಉಳ್ಳಾಲ : ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಉಳ್ಳಾಲ : ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಉಳ್ಳಾಲ: ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಉಪ್ಪಳ ಪಚ್ಚಿಲಾಂಬರ್ ನಿವಾಸಿ ಫಝಲ್ (31) ಬಂಧಿತ ಆರೋಪಿ. ಪ್ರಕರಣವೊಂದರಲ್ಲಿ ಆರೋಪಿಯಾಗಿ ನ್ಯಾಯಾಂಗ ಬಂಧನದಲ್ಲಿದ್ದ ಫಝಲ್ 2021ರಲ್ಲಿ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದ. ಆದರೆ ಬಳಿಕ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಎನ್ನಲಾಗಿದೆ.

ಈತನ ಬಂಧನಕ್ಕೆ ವಾರೆಂಟ್ ಹೊರಡಿಸಲಾಗಿದ್ದು, ಕಾರ್ಯಾಚರಣೆ ನಡೆಸಿದ ಪೊಲೀಸರು ಉಪ್ಫಳದಲ್ಲಿರುವ ಆತನ ಮನೆಯಿಂದ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.


RELATED ARTICLES

LEAVE A REPLY

Please enter your comment!
Please enter your name here

Most Popular

Recent Comments