ಬೈಕ್ ಅಪಘಾತದಲ್ಲಿ ವೈದ್ಯ ವಿದ್ಯಾರ್ಥಿ ಮೃತ್ಯು

ಉಳ್ಳಾಲ: ಬೈಕ್ ಅಪಘಾತದಲ್ಲಿ ವೈದ್ಯ ವಿದ್ಯಾರ್ಥಿ ಸಾವನ್ನಪ್ಪಿ , ಸಹಸವಾರ ಗಾಯಗೊಂಡ ಘಟನೆ ಕುತ್ತಾರು ಸಮೀಪದ ಮದಕ ಕ್ವಾಟ್ರಗುತ್ತು ಬಳಿ ನಿನ್ನೆ ತಡರಾತ್ರಿ ವೇಳೆ ಸಂಭವಿಸಿದೆ. ಬೆಂಗಳೂರು ಯಶವಂತಪುರ ನಿವಾಸಿ ನಿಶಾಂತ್ ( 22) ಮೃತರು. ಸಹಸವಾರ ಬೀದರ್ ನಿವಾಸಿ ಶಕೀಬ್ ಗಾಯಗೊಂಡಿದ್ದಾರೆ. ದೇರಳಕಟ್ಟೆಯ ವೈದ್ಯಕೀಯ ಕಾಲೇಜಿನಲ್ಲಿ ಎಂಬಿಬಿಎಸ್ ಪೂರೈಸಿ ದ್ವಿತೀಯ ವರ್ಷದ ಇಂಟರ್ನ್‍ಶಿಪ್ ನಡೆಸುತ್ತಿದ್ದರು.

ಕುತ್ತಾರು ಸಿಲಿಕೋನಿಯಾ ಫ್ಲ್ಯಾಟ್ ನಲ್ಲಿ ವಾಸಿಸುತ್ತಿದ್ದ ಇಬ್ಬರೂ ರಾತ್ರಿ 250 ಸಿಸಿ ಇರುವ ಬೈಕಿನಲ್ಲಿ ರೈಡ್ ತೆರಳುವಾಗ ರಸ್ತೆಯಲ್ಲಿದ್ದ ಹಂಪ್ ಗಮನಕ್ಕೆ ಬಾರದೇ, ಬೈಕ್ ಮೇಲಕ್ಕೆ ಹಾರಿ ಇಬ್ಬರೂ ಎಸೆಯಲ್ಪಟ್ಟು ಸವಾರ ನಿಶಾಂತ್ ಗಂಭೀರ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಹೆಚ್ಚು ವಾಹನಸಂಚಾರವಿಲ್ಲದ ರಸ್ತೆಯಾಗಿದ್ದರಿಂದ ರಾತ್ರಿ12.15 ರ ವೇಳೆಗೆ ಅಪಘಾತ ಸಂಭವಿಸಿದ್ದರೂ 12.30 ವೇಳೆ ಸ್ಥಳೀಯರ ಗಮನಕ್ಕೆ ಬಂದು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಮಂಗಳೂರು ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Posts

Leave a Reply

Your email address will not be published.