ಉಳ್ಳಾಲ: ಮಾದಕ ವಸ್ತು ಕೋಕೆನ್ ಪತ್ತೆ ಇಬ್ಬರು ಆರೋಪಿಗಳ ಸೆರೆ

ಉಳ್ಳಾಲ: ಗೋವಾ ರಾಜ್ಯದಿಂದ ಮಂಗಳೂರು ನಗರ ಹಾಗೂ ಕೇರಳ ರಾಜ್ಯಕ್ಕೆ ನಿಷೇದಿತ ಮಾದಕ ವಸ್ತುವಾದ ಕೋಕೇನ್ ನ್ನು ಸಾಗಾಟ ಹಾಗೂ ಮಾರಾಟ ಮಾಡುತ್ತಿದ್ದವರನ್ನು ಪತ್ತೆ ಹಚ್ಚಿದ ಸಿಸಿಬಿ ಪೊಲೀಸರ ತಂಡ 35 ಗ್ರಾಂ ಕೋಕೆನ್ ನ್ನು ವಶಪಡಿಸಿಕೊಂಡಿದ್ದಾರೆ‌.


ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಇನ್ಸ್ ಪೆಕ್ಟರ್ ಶ್ಯಾಮ್ ಸುಂದರ್ ಹೆಚ್ ಎಂ ನೇತೃತ್ವದ ಸಿಸಿಬಿ ಪೊಲೀಸರು ಉಳ್ಳಾಲ ತಾಲೂಕು ಅಂಬ್ಲಮೊಗರು ಗ್ರಾಮದ ಎಲಿಯಾರ್ ಪದವು ಮೈದಾನದ ಬಳಿಯಲ್ಲಿ ದ್ವಿಚಕ್ರ ವಾಹನದಲ್ಲಿ ಪತ್ತೆಹಚ್ಚಲಾಗಿದೆ.

ಅಂಬ್ಲಮೊಗರು ಸಣ್ಣಮದಕ ನಿವಾಸಿ ಸದಕತ್.ಯು ಯಾನೆ ಶಾನ್ ನವಾಜ್(31), ಸೇನರಬೆಟ್ಟು ಮನೆ, ಮದಕ ಮಹಮ್ಮದ್ ಅಶ್ಫಕ್ ಯಾನೆ ಅಶ್ಫಾ(25) ಎಂಬವರನ್ನು ಬಂಧಿಸಲಾಗಿದೆ. ಆರೋಪಿಗಳಿಂದ ಹೊಂಡಾ ಅಕ್ಟಿವಾ ಸ್ಕೂಟರ್ ಅನ್ನು ವಶಪಡಿಸಿಕೊಳ್ಳಲಾಗಿದೆ. ರೂ. 2,72,000/- ರೂ ಮೌಲ್ಯದ 35 ಗ್ರಾಂ ನಿಷೇಧಿತ ಮಾದಕ ವಸ್ತು ಕೋಕೆನ್, 3 ಮೊಬೈಲ್ ಫೋನ್ ಗಳನ್ನು, ಡಿಜಿಟಲ್ ತೂಕ ಮಾಪಕ, ನಗದು ರೂ. 5560/-ನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ ರೂ. 4,00,000/- ಆಗಿದೆ. ಈ ಬಗ್ಗೆ ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಆರೋಪಿಗಳ ಪೈಕಿ ಸದಕತ್.ಯು ಯಾನೆ ಶಾನ್ ನವಾಜ್ ಎಂಬಾತನ ವಿರುದ್ದ ಈ ಹಿಂದೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಮಾದಕ ವಸ್ತು ಸಾಗಾಟದ ಪ್ರಕರಣ ಹಾಗೂ ಹಲ್ಲೆ ಪ್ರಕರಣ ದಾಖಲಾಗಿದೆ.
ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಪೊಲೀಸ್ ನಿರೀಕ್ಷಕರಾದ ಶ್ಯಾಮ್ ಸುಂದರ್ ಹೆಚ್ ಎಂ, ಪಿಎಸ್ಐಯವರಾದ ಶರಣಪ್ಪ ಭಂಡಾರಿ ಮತ್ತು ಸಿಸಿಬಿ ಸಿಬ್ಬಂದಿ ಪಾಲ್ಗೊಂಡಿದ್ದರು.

Related Posts

Leave a Reply

Your email address will not be published.