ಮಜಿಲ ನಿವಾಸಿ ಮೃತದೇಹ ನೇತ್ರಾವತಿಯಲ್ಲಿ ಪತ್ತೆ
ಉಳ್ಳಾಲ: ಪಾಂಡೇಶ್ವರ ಠಾಣಾ ವ್ಯಾಪ್ತಿಯಿಂದ ನಾಪತ್ತೆಯಾಗಿದ್ದ ವೃದ್ಧರೋರ್ವರ ಮೃತದೇಹ ಉಳ್ಳಾಲ ಉಳಿಯ ನೇತ್ರಾವತಿ ನದಿತೀರದಲ್ಲಿ ಇಂದು ಬೆಳಿಗ್ಗೆ ಪತ್ತೆಯಾಗಿದೆ.
ಜೆಪ್ಪು ಮಜಿಲ ನಿವಾಸಿ ಕುಮಾರ್(೭೮) ಎಂಬವರ ಮೃತದೇಹ ಇಂದು ಪತ್ತೆಯಾಗಿದೆ. ಗುರುವಾರ ಬೆಳಿಗ್ಗೆಯಿಂದ ನಾಪತ್ತೆಯಾಗಿದ್ದ ಇವರ ಕುರಿತು ಮನೆಮಂದಿ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದರು. ಕುಮಾರ್ ಅವರು ಚರ್ಮರೋಗವಿದ್ದ ಹಿನ್ನೆಲೆಯಲ್ಲಿ ಖಿನ್ನತೆಗೆ ಒಳಗಾಗಿದ್ದರು. ಕೆಲ ದಿನಗಳ ಹಿಂದೆಯಷ್ಟೇ ಕುದ್ರು ಭಾಗದಲ್ಲಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾಗ ಸ್ಥಳೀಯರ ಗಮನಕ್ಕೆ ಬಂದು ರಕ್ಷಿಸಿದ್ದರು. ಇದೀಗ ಮತ್ತೆ ಆತ್ಮಹತ್ಯೆ ನಡೆಸಿದ್ದಾರೆ. ಉಳಿಯ ನಿವಾಸಿ ಪ್ರೇಮ್ ಪ್ರಕಾಶ್ ನೇತೃತ್ವದ ತಂಡ ಮೀನುಗಾರಿಕಾ ಸರ್ವೇ ಹಿನ್ನೆಲೆಯಲ್ಲಿ ನದಿ ನೀರಿನಲ್ಲಿ ಮೃತದೇಹ ಪತ್ತೆಯಾಗಿತ್ತು. ಸಂಬಂಧಿಕರು ಹಾಗೂ ಪಾಂಡೇಶ್ವರ ಠಾಣಾ ಪೊಲೀಸರು ಸ್ಥಳಕ್ಕಾಗಮಿಸಿ ಮೃತದೇಹವನ್ನು ಕೊಂಡೊಯ್ದಿದ್ದಾರೆ. ಮೃತರು ಪತ್ನಿ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.