ಉಳ್ಳಾಲ ತಾಲೂಕಿನ ತೊಕ್ಕೊಟ್ಟು ಬಳಿ 100 ಅಡಿ ಎತ್ತರದ ಧ್ವಜಸ್ತಂಭದಲ್ಲಿ ಶಾಸಕ ಯು.ಟಿ ಖಾದರ್ ಅವರು ಧ್ವಜಾರೋಹಣ ನೆರವೇರಿಸಿದರು. ವಿಧಾನಪರಿಷತ್ ಸದಸ್ಯರಾದ ಬಿ.ಎಂ. ಫಾರೂಕ್, ಉಳ್ಳಾಲ ನಗರಸಭೆಯ ಪೌರಾಯುಕ್ತರಾದ ವಿದ್ಯಾ ಎಂ. ಕಾಳೆ, ತಹಶೀಲ್ದಾರ ಟಿ.ಜಿ. ಗುರುಪ್ರಸಾದ್ಉಳ್ಳಾಲ ನಗರಸಭೆಯ ಅಧ್ಯಕ್ಷರಾದ ಚಿತ್ರಕಲಾ ಕೆ, ಮೈಸೂರು ಇಂಡಸ್ಟ್ರೀಸ್ ಲಿಮಿಟೆಡ್‍ನ ಮಾಜಿ ಅಧ್ಯಕ್ಷ ಸಂತೋಷ್ ಕುಮಾರ್ ಬೊಳಿಯಾರ್, ಉಳ್ಳಾಲ ಬಿಜೆಪಿ ಅಧ್ಯಕ್ಷ ಚಂದ್ರಹಾಸ್ ಪಂಡಿತ್, ಮಾಜಿ ಜಿ.ಪಂ. ಸದಸ್ಯರು ಸತೀಶ್ ಕುಂಪಲ್, ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದಾಶಿವ ಉಳ್ಳಾಲ ಮೊದಲಾದವರು ಉಪಸ್ಥಿತರಿದ್ದರು.


