ಉಳ್ಳಾಲ: ದೈತ್ಯ ಗಾತ್ರದ ಪಿಲಿ ತೊರಕೆ ಮೀನು ಬಲೆಗೆ

ಉಳ್ಳಾಲ: ದೈತ್ಯ ಗಾತ್ರದ ಪಿಲಿ ತೊರಕೆ ಮೀನು ಸೋಮೇಶ್ವರ ಉಚ್ಚಿಲ ಮೀನುಗಾರರ ಬಲೆಗೆ ಸುಮಾರು 75 ಕೆಜಿ ಬೃಹತ್ ಗಾತ್ರದ ಮೀನು ಬಲೆಗೆ ಬಿದ್ದಿದೆ. ಸಮುದ್ರ ತಟದ ಸಮೀಪ ಬೀಸಿದ ಬಲೆಗೆ ಈ ಮೀನು ಬಿದ್ದಿದೆ. ಉಚ್ಚಿಲ ಪೆರಿಬೈಲ್ ನಿವಾಸಿ ನಾಡದೋಣಿ ಮೀನುಗಾರರಾದ ಶೈಲೇಶ್ ಉಚ್ಚಿಲ, ಚಂದ್ರ ಉಚ್ಚಿಲ, ಅಝೀಝ್, ಕಲ್ಪೇಶ್ ಮತ್ತು ಶಂಭು ನ್ಯೂ ಉಚ್ಚಿಲ ಎಂಬವರು ಸಮುದ್ರ ತೀರದಲ್ಲಿ ಹಾಕಲಾಗಿದ್ದ ಬಲೆಗೆ ಮೀನು ಬಿದ್ದಿದೆ.

ಈ ವರ್ಷದ ತಮ್ಮ ಮೀನುಗಾರಿಕೆಯಲ್ಲಿ ಸಿಕ್ಕ ಅತಿದೊಡ್ಡ ಮೀನು ಇದಾಗಿದೆ ಅನ್ನುವ ಅಭಿಪ್ರಾಯ ಅವರದ್ದು. ಪ್ರತಿವರ್ಷದಂತೆ ಈ ಬಾರಿಯೂ ಸಮುದ್ರದಲ್ಲಿ ಕೆಸರಿನಂತೆ ಅಲೆಗಳು ಬರುತ್ತವೆ. ಈ ನೀರಿಗೆ ಮೀನುಗಾರಿಕೆಯಲ್ಲಿ ಅತ್ಯಂತ ಪಾವಿತ್ರ್ಯತೆಯೂ ಇದೆ. ಅದರಲ್ಲಿ ಹಲವು ಬಗೆಯ ಮೀನುಗಳು ಬರುವ ಐತಿಹ್ಯವಿದೆ. ಆದರೆ ಈ ಬಾರಿ ದೊಡ್ಡ ಗಾತ್ರದ ಪಿಲಿತೊರಕೆ ಬಂದಿರುವುದು ಮೀನುಗಾರರಲ್ಲಿ ಉತ್ಸಾಹ ಮೂಡಿಸಿದೆ.

Related Posts

Leave a Reply

Your email address will not be published.