ಉಳ್ಳಾಲ: ಆ.27ಕ್ಕೆ ಉಳ್ಳಾಲ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಉದ್ಘಾಟನೆ
ಉಳ್ಳಾಲ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಉಳ್ಳಾಲ ತಾಲೂಕು ಘಟಕದ ಉದ್ಘಾಟನಾ ಸಮಾರಂಭ ಆ.27 ರಂದು ಭಾನುವಾರ ಸಂಜೆ 3.00 ಗಂಟೆಗೆ ತೊಕ್ಕೊಟ್ಟು ಅಂಬಿಕಾ ರೋಡಿನ ಗಟ್ಟಿ ಸಮಾಜ ಭವನದಲ್ಲಿ ನೆರವೇರಲಿದೆ ಎಂದು ಉಳ್ಳಾಲ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ವಸಂತ್ ಎನ್.ಕೊಣಾಜೆ ಹೇಳಿದ್ದಾರೆ.
ಉಳ್ಳಾಲ ಪ್ರೆಸ್‍ಕ್ಲಬ್‍ನಲ್ಲಿ ಆಯೋಜಿಸಿದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು ಕರ್ನಾಟಕ ವಿಧಾನಸಭಾ ಅಧ್ಯಕ್ಷ ಯು.ಟಿ ಖಾದರ್ ಉದ್ಘಾಟನೆ ನೆರವೇರಿಸಲಿದ್ದಾರೆ. ಸಂಸದ ನಳಿನ್ ಕುಮಾರ್ ಕಟೀಲ್ ಪತ್ರಕರ್ತರ ಕ್ಷೇಮಾಭಿವೃದ್ಧಿ ಯೋಜನೆಗೆ ಚಾಲನೆ ನೀಡಲಿದ್ದಾರೆ. ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಗ್ರಾಮಸಂಪರ್ಕ ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ. ಸಮಾರಂಭದ ಅಧ್ಯಕ್ಷತೆಯನ್ನು ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶಿವಾನಂದ ತಗಡೂರು ವಹಿಸಲಿದ್ದಾರೆ.
ಸುದ್ಧಿಗೋಷ್ಠಿಯಲ್ಲಿ ಉಳ್ಳಾಲ ತಾಲೂಕು ಘಟಕದ ಪ್ರಧಾನ ಕಾರ್ಯದರ್ಶಿ ಶಶಿಧರ್ ಪೆÇಯ್ಯತ್ತಬೈಲ್, ಪತ್ರಕರ್ತರಾದ ಸತೀಶ್ ಪುಂಡಿಕಾಯಿ, ದಿನೇಶ್ ನಾಯಕ್, ಡಾ.ಸತೀಶ್ ಕೊಣಾಜೆ, ಗಣೇಶ್ ತಲಪಾಡಿ, ಆಸೀಫ್ ಬಬ್ಬುಕಟ್ಟೆ, ಮೋಹನ್ ಕುತ್ತಾರ್, ಶಿವಾಂಕರ್, ರಜನಿಕಾಂತ್ ಉಪಸ್ಥಿತರಿದ್ದರು.