ಉಳ್ಳಾಲ: ಕೊಂಡಾಣ ದೈವಸ್ಥಾನದ ಭಂಡಾರ ಮನೆ ಧ್ವಂಸ: ಸ್ಥಳಕ್ಕೆ ತಹಶೀಲ್ದಾರ್, ಮುಖ್ಯಾಧಿಕಾರಿ, ಎಸಿಪಿ ಭೇಟಿ ಪರಿಶೀಲನೆ

ಉಳ್ಳಾಲ ತಾಲೂಕಿನ ಕೊಂಡಾಣ ಕ್ಷೇತ್ರದ ಪಿಲಿಚಾಮುಂಡಿ ದೈವಸ್ಥಾನಕ್ಕೆ ಸೇರಿದ ನಿರ್ಮಾಣ ಹಂತದ ಭಂಡಾರ ಮನೆಯನ್ನು ಕಿಡಿಗೇಡಿಗಳು ಜೆಸಿಬಿ ಮೂಲಕ ಧ್ವಂಸಗೊಳಿಸಿದ ಘಟನೆ ನಡೆದಿದೆ. ಭಾರಿ ಸಂಖ್ಯೆಯಲ್ಲಿ ಭಕ್ತರು ಜಮಾವಣೆಗೊಂಡ ಹಿನ್ನೆಲೆ ಪೊಲೀಸ್ ಭದ್ರತೆ ಹೆಚ್ಚಿಸಲಾಗಿದೆ.




ಸ್ಥಳಕ್ಕೆ ಕೋಟೆಕಾರು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಆನಂದ್, ತಹಶೀಲ್ದಾರ್ ಪುಟ್ಟರಾಜು, ಎಸಿಪಿ ಧನ್ಯಾ ನಾಯಕ್ ಭೇಟಿನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಆನಂದ್ ಅವರು ಠಾಣೆಗೆ ದೂರು ನೀಡಿದ್ದಾರೆ. ಭಾರೀ ಸಂಖ್ಯೆಯಲ್ಲಿ ಭಕ್ತರ ಜಮಾವಣೆ ಹಿನ್ನೆಲೆಯಲ್ಲಿ ಉಳ್ಳಾಲ ಪೊಲೀಸರ ಜೊತೆಗೆ ಎರಡು ಪೊಲೀಸ್ ತುಕಡಿಗಳನ್ನು ನಿಯೋಜಿಸಲಾಗಿದೆ.
ಕ್ಷೇತ್ರದ ಭಕ್ತರಾದ ಕೆ.ಪಿ ಸುರೇಶ್ ಮಾತನಾಡಿ, ಕ್ಷೇತ್ರವನ್ನ ದೋಚುವ ಗುರಿಕಾರರ ಅಗತ್ಯತೆ ಇಲ್ಲ.ಇಲ್ಲಿ ಮತ್ತೆ ಭಂಡಾರಮನೆ ಪುನರ್ ನಿರ್ಮಾಣ ಆಗಲೇ ಬೇಕು.ಆ ಮೂಲಕ ದೈವಗಳ ಕೋಟಿಗಟ್ಟಲೆ ಬೆಲೆ ಬಾಳುವ ಒಡವೆಗಳನ್ನ ಸೇಫ್ ಲಾಕರಲ್ಲಿ ಇಡುವಂತಾಗಬೇಕೆಂದರು.
ಘಟನೆ ಸಂಬಂಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.