ಟಾರ್ಗೆಟ್ ಇಲ್ಯಾಸ್ ಕೊಲೆ ಪ್ರಕರಣದ ಆರೋಪಿಯ ಬರ್ಬರ ಹತ್ಯೆ

ಉಳ್ಳಾಲ: ಟಾರ್ಗೆಟ್ ಇಲ್ಯಾಸ್ ಕೊಲೆ ಪ್ರಕರಣದ ಆರೋಪಿಯನ್ನು ಅಟ್ಟಾಡಿಸಿ ತಲವಾರಿನಿಂದ ಕಡಿದು ಹತ್ಯೆ ನಡೆಸಿರುವ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕಲ್ಲಾಪುವಿನಲ್ಲಿ ನಡೆದಿದೆ.

ಉಳ್ಳಾಲ ಕಡಪ್ಪುರ ನಿವಾಸಿ ಸಮೀರ್ (35) ಹತ್ಯೆಯಾದವರು. ರಾತ್ರಿ 10ರ ಸುಮಾರಿಗೆ ತಾಯಿ ಜೊತೆಗೆ ಕಲ್ಲಾಪುವಿನ ರೆಸ್ಟೋರೆಂಟ್ ಒಂದಕ್ಕೆ ಊಟಕ್ಕೆಂದು ಬಂದ ಸಂದರ್ಭ ಹಿಂಬದಿಯಿಂದ ಕಾರಿನಲ್ಲಿ ಹಿಂಬಾಲಿಸಿದ್ದ ತಂಡ ಸಮೀರ್ ಇಳಿಯುತ್ತಿದ್ದಂತೆ ತಲವಾರಿನಿಂದ ಕಡಿದು ಕೊಲೆಗೆ ಯತ್ನಿಸಿದೆ. ಅಪಾಯವನ್ನು ಅರಿತ ಸಮೀರ್ ತಕ್ಷಣ ಸ್ಥಳದಿಂದ ಓಡಲು ಯತ್ನಿಸಿ, ಈ ವೇಳೆ ಅಟ್ಟಾಡಿಸಿದ ಐದು ಮಂದಿಯ ತಂಡ ಕಲ್ಲಾಪು ಜಂಕ್ಷನ್ನಿನಿಂದ 500 ಮೀ ದೂರದವರೆಗೂ ಅಟ್ಟಾಡಿಸಿ, ಅಲ್ಲಿ ತಲವಾರಿನಿಂದ ಕಡಿದು ಹತ್ಯೆ ನಡೆಸಿದೆ.

2018 ರಲ್ಲಿ ರೌಡಿಶೀಟರ್ ಟಾರ್ಗೆಟ್ ಇಲ್ಯಾಸ್ ನನ್ನು ಜೆಪ್ಪುವಿನ ಫ್ಲಾಟ್‍ವೊಂದರಲ್ಲಿ ದಾವುದ್, ಶಮೀರ್, ರಿಯಾಝ್, ನಮೀರ್ , ಅಬ್ದುಲ್ ಖಾದರ್, ಉಮ್ಮರ್ ನವಾಫ್, ಮೊಹಮ್ಮದ್ ನಝೀರ್, ನೌಷಾದ್, ಅಝ್ಗರ್ ಆಲಿ ಎಂಬವರು ಸೇರಿಕೊಂಡು ಹತ್ಯೆ ನಡೆಸಿದ್ದರು. ಪ್ರಕರಣದಲ್ಲಿ ಶಮೀರ್ ಎರಡನೇ ಆರೋಪಿಯಾಗಿದ್ದು, ದಾವುದ್ ಮತ್ತು ಶಮೀರ್ ಇಬ್ಬರು ನೇರವಾಗಿ ಫ್ಲ್ಯಾಟ್ ಪ್ರವೇಶಿಸಿ ಇಲ್ಯಾಸ್ ನನ್ನು ಹತ್ಯೆ ನಡೆಸಿರುವುದು ತನಿಖೆಯಲ್ಲಿ ಬಯಲಾಗಿತ್ತು. ಪ್ರಕರಣ ಸಂಬಂಧ ಜೈಲುಪಾಲಾದ ಶಮೀರ್ ಕೆಲ ದಿನಗಳ ಹಿಂದಷ್ಟೇ ಬಿಡುಗಡೆಗೊಂಡಿದ್ದ. ಘಟನಾ ಸ್ಥಳದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನ ಜಮಾಯಿಸಿದ್ದು, ಉಳ್ಳಾಲ ಠಾಣಾ ಪೊಲೀಸ್ರು ತನಿಖೆ ಆರಂಭಿಸಿದ್ದಾರೆ.

add - Haeir

Related Posts

Leave a Reply

Your email address will not be published.