ಉಳ್ಳಾಲ : ಪುಣ್ಯಕೋಟಿ ನಗರದಲ್ಲಿ ಬಾರ್ ಓಪನ್‍ಗೆ ಆಕ್ರೋಶ – ಶಾಲಾ ವಿದ್ಯಾರ್ಥಿಗಳಿಂದ ಗ್ರಾ.ಪಂ.ಗೆ ಮುತ್ತಿಗೆ

ಉಳ್ಳಾಲದ ಕೈರಂಗಳ ಪುಣ್ಯಕೋಟಿನಗರದಲ್ಲಿ ನೂತನವಾಗಿ ಆರಂಭವಾದ ಬಾರ್ ಎಂಡ್ ರೆಸ್ಟೋರೆಂಟ್ ತೆರವು ಆಗುವವರೆಗೂ ಪ್ರಜಾಪ್ರಭುತ್ವ ರೀತಿಯಲ್ಲಿ ಅಮರಣಾಂತ ಸತ್ಯಾಗ್ರಹದಂತಹ ಹೋರಾಟ ನಡೆಸಲು ಶಾಲಾಡಳಿತ ಮಂಡಳಿ ಸಿದ್ಧವಿದೆ ಎಂದು ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ರಾಜಾರಾಮ ಭಟ್ ಹೇಳಿದ್ದಾರೆ.

ಬಾಳೆಪುಣಿ ಗ್ರಾ.ಪಂ ವ್ಯಾಪ್ತಿಯ ಪುಣ್ಯಕೋಟಿನಗರ ಸಮೀಪದಲ್ಲಿ ನೂತನವಾಗಿ ಆರಂಭವಾದ ಬಾರ್ ಎಂಡ್ ರೆಸ್ಟೋರೆಂಟ್ ವಿರೋಧಿಸಿ ಪುಣ್ಯಕೋಟಿ ನಗರ ಶಾರದಾ ವಿದ್ಯಾಗಣಪತಿ ವಿದ್ಯಾಕೇಂದ್ರದ ವಿದ್ಯಾರ್ಥಿಗಳಿಂದ ಬಾಳೆಪುಣಿ ಗ್ರಾ.ಪಂ ಆಡಳಿತ ವಿರುದ್ಧ ಪ್ರತಿಭಟನೆ ಹಾಗೂ ಮನವಿ ಸಲ್ಲಿಸಿ ಬಳಿಕ ಮಾತನಾಡಿದರು. ಸಾಮಾನ್ಯ ಸಭೆಯಲ್ಲಿ ನಿರ್ಣಯಿಸಿದಂತೆ ಪುಣ್ಯಕೋಟಿನಗರದ ಗೋಶಾಲೆ ಹಾಗೂ ಶಾಲೆಯ ಬಳಿ ಬಾರ್ ತೆರೆಯಲು ಉದ್ದೇಶಿಸಿರುವುದು ಕಾನೂನು ವಿರೋಧಿಯಾಗಿದೆ.

ಸರಕಾರದ ಮಾರ್ಗದರ್ಶನವನ್ನು ಪಾಲಿಸದೆ ಬಾರ್ ಆಂಡ್ ರೆಸ್ಟೋರೆಂಟ್ ಗೆ ಅನುಮತಿ ನೀಡಲಾಗಿದೆ. ಶಾಲೆಯ ಆವರಣದ 100 ಮೀ ಅಂತರದಲ್ಲಿ ಯಾವುದೇ ಅಮಲು ಪದಾರ್ಥಗಳನ್ನು ಮಾರಾಟ ಮಾಡುವಂತಿಲ್ಲ. ಅದನ್ನು ಕಡೆಗಣಿಸಿ ತರಾತುರಿಯಲ್ಲಿ ಸಾರ್ವಜನಿಕ ಆಕ್ಷೇಪ ತೆಗೆದುಕೊಳ್ಳದೇ ಆರಂಭಿಸಲಾಗಿದೆ. ಶಾಲೆಯ ವಿದ್ಯಾ ಚಟುವಟಿಕೆಗಳಿಗೆ, ಶಾಲಾ ವಿದ್ಯಾರ್ಥಿನಿಯರು ಸಂಜೆ ಮನೆಗೆ ತೆರಳುವಾಗ ತೊಂದರೆಯಾಗಲಿದೆ. ಇವೆಲ್ಲವೂ ಕಾನೂನು ವಿರೋಧಿಯಾಗಿದ್ದು, ಸರಕಾರ ತಕ್ಷಣ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಶಾಲಾ ವಿದ್ಯಾರ್ಥಿನಿ ರಶ್ಮಿತ ಮಾತನಾಡಿ ಶಾಲೆಯ ಆವರಣದ ಬಳಿ ಬಾರ್ ಸೇರಿದಂತೆ, ಮಾದಕ ವಸ್ತುಗಳ ಮಾರಾಟ ಕಾನೂನು ಪ್ರಕಾರ ನಿಷೇದವಿದ್ದರೂ ಬಾರ್ ಆರಂಬಿಸಲು ಅನುಮತಿ ನೀಡುವ ಮೂಲಕ ಕಾನೂನು ಉಲ್ಲಂಘನೆಯಾಗಿದ್ದು ಇದಕ್ಕೆ ಸಂಬಂಧಪಟ್ಟ ಅ?ಕಾರಿಗಳು ಕ್ರಮ ಕೈಗೊಳ್ಳಬೇಕು ಎಂದರು. ಶಾಲೆಯ ಪರವಾಗಿ ವಿದ್ಯಾರ್ಥಿಗಳು ಮತ್ತು ಶಾಲಾ ಆಡಳಿತ ಮಂಡಳಿಯಿಂದ ಬಾಳೆಪುಣಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಝರೀನಾ ಆವರಿಗೆ ಮನವಿಯನ್ನು ಸಲ್ಲಿಸಲಾಯಿತು. ಸ್ಥಳದಲ್ಲಿ ಪೆÇಲೀಸ್ ಬಂದೋಬಸ್ತ್ ಹಾಕಲಾಗಿತ್ತು.

Related Posts

Leave a Reply

Your email address will not be published.