ಆಪ್ತನ ಸಹೋದರನ ಅಂತಿಮಯಾತ್ರೆಗೆ ಹೆಗಲುಕೊಟ್ಟ ಸ್ಪೀಕರ್ ಖಾದರ್

ಉಳ್ಳಾಲ: ಅಕಾಲಿಕವಾಗಿ ಸಾವನ್ನಪ್ಪಿದ ಮುಡಿಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ಕಾಜವ ಅವರ ಸಹೋದರ ಶರತ್ ಕಾಜವ(55) ಅವರ ಅಂತಿಮಯಾತ್ರೆಯಲ್ಲಿ ಭಾಗವಹಿಸಿದ ವಿಧಾನಸಭಾ ಸ್ಪೀಕರ್ ಯು.ಟಿ ಖಾದರ್ ಶವಕ್ಕೆ ಹೆಗಲುಕೊಟ್ಟು ಮಾನವೀಯತೆ ಮೆರೆದರು.

ಮುಡಿಪು ಮಿತ್ತಕೋಡಿ ನಿವಾಸಿ ಶರತ್ ಕಾಜವ ಇಂದು ನಸುಕಿನ ಜಾವ ಹೃದಯಾಘಾತಕ್ಕೊಳಗಾಗಿ ಅಕಾಲಿಕವಾಗಿ ಸಾವನ್ನಪ್ಪಿದ್ದರು. ವಿಚಾರ ಬೆಳಕಿಗೆ ಬರುತ್ತಿದ್ದಂತೆ ವಿಧಾನಸಭಾ ಸ್ಪೀಕರ್ ಯು.ಟಿ ಖಾದರ್ ಅವರು ಪೂರ್ವನಿಗದಿ ಪಡಿಸಿದ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಪಡಿಸಿ ತಕ್ಷಣವೇ ಮಿತ್ತಕೋಡಿಯ ಮರಣ ಹೊಂದಿದ ನಿವಾಸಕ್ಕೆ ದೌಡಾಯಿಸಿದ್ದರು. ಸಂಬಂಧಿಕರಲ್ಲಿ ಧೈರ್ಯ ತುಂಬಿದ ಅವರು ನಂತರ ನಡೆದ ಅಂತಿಮಯಾತ್ರೆಗೆ ಹೆಗಲಾದರು.

ಕಾಂಗ್ರೆಸ್‍ನ ಹಿರಿಯ ಮುತ್ಸದ್ದಿ ಜನಾರ್ದನ ಪೂಜಾರಿಯವರು ಹಾಕಿಕೊಟ್ಟ ಸಂಪ್ರದಾಯವನ್ನು ಮುಂದುವರಿಸಿದ ಶಾಸಕರು ಎಂಬ ಕೀರ್ತಿಗೆ ಯು.ಟಿ ಖಾದರ್ ಭಾಜನರಾಗಿದ್ದಾರೆ.

ನರಿಂಗಾನ ಕಂಬಳದ ಕಾರ್ಯಾಧ್ಯಕ್ಷ ಪ್ರಶಾಂತ್ ಕಾಜವ ಸಹೋದರ, ಪ್ರಗತಿಪರ ಕೃಷಿಕ ವೆಂಕಪ್ಪ ಕಾಜವರ ಪುತ್ರ. ಕಂಬಳ ಸಮಿತಿಯ ಸದಸ್ಯರೂ ಆಗಿದ್ದ ಶರತ್ ಕಾಜವ ಮಿತ್ತಕೋಡಿ
ಕಂಬಳದ ಯಶಸ್ಸಿಗಾಗಿ ಹಲವು ವಾರಗಳ ಕಾಲ ದುಡಿದಿದ್ದರು.ತಾಯಿಯ ಅನಾರೋಗ್ಯವಿದ್ದಾಗಲೂ ಕಂಬಳದ ಕರೆಯಲ್ಲಿ ಆಗಬೇಕಾದ ವ್ಯವಸ್ಥೆ ಬಗ್ಗೆ ತುಂಬ ಕಾಳಜಿ ವಹಿಸಿದ್ದರು. ಪ್ರಗತಿಪರ ಕೃಷಿಕರಾಗಿದ್ದ ಅವರು ಪತ್ನಿ, ಪುತ್ರ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

Related Posts

Leave a Reply

Your email address will not be published.