HomeFresh Newsಉಳ್ಳಾಲ: ಜಾನುವಾರುಗಳ ಮೇಲೆ ಹರಿದ ಕಾರು: ಮೂರು ಜಾನುವಾರು ಮೃತ್ಯು, ಓರ್ವನಿಗೆ ಗಾಯ

ಉಳ್ಳಾಲ: ಜಾನುವಾರುಗಳ ಮೇಲೆ ಹರಿದ ಕಾರು: ಮೂರು ಜಾನುವಾರು ಮೃತ್ಯು, ಓರ್ವನಿಗೆ ಗಾಯ

ಉಳ್ಳಾಲ: ರಸ್ತೆಬದಿ ಮಲಗಿದ್ದ ಜಾನುವಾರುಗಳ ಮೇಲೆ ಕಾರು ಚಲಿಸಿ ಮೂರು ಜಾನುವಾರುಗಳು ಮೃತಪಟ್ಟು, ವೈದ್ಯ ವಿದ್ಯಾರ್ಥಿ ಗಾಯಗೊಂಡ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಪಂಡಿತ್ ಹೌಸ್ ನಲ್ಲಿ ನಿನ್ನೆ ತಡರಾತ್ರಿ ವೇಳೆ ಸಂಭವಿಸಿದೆ.

ಮೈಸೂರು ಮೂಲದ ಡಾ.ವಿವೇಕ್ ಶಶಿಕುಮಾರ್ ಗಾಯಗೊಂಡವರು. ದೇರಳಕಟ್ಟೆಯಿಂದ ತೊಕ್ಕೊಟ್ಟು ಕಡೆಗೆ ತೆರಳುತ್ತಿದ್ದ ಕಾರು ನಸುಕಿನ 3.30 ಸುಮಾರಿಗೆ ಜಾನುವಾರುಗಳಿಗೆ ಢಿಕ್ಕಿ ಹೊಡೆದು ಪಲ್ಟಿ ಹೊಡೆದಿದೆ. ಪರಿಣಾಮ ರಸ್ತೆ ಬದಿಯಲ್ಲಿ ಮಲಗಿದ್ದ ಮೂರು ಜಾನುವಾರುಗಳು ಸಾವನ್ನಪ್ಪಿವೆ, ಕಾರಲ್ಲಿದ್ದ ವೈದ್ಯ ವಿದ್ಯಾರ್ಥಿ ಕೈ ಮೂಳೆ ಮುರಿತಕ್ಕೊಳಗಾಗಿದೆ.  ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments