ಜೈನ ಮಠದ ಭಟ್ಟಾರಕರಿಂದ ಆಶೀರ್ವಾದ ಪಡೆದ ಉಮಾನಾಥ ಕೋಟ್ಯಾನ್

ಮೂಡುಬಿದಿರೆ : ಮುಲ್ಕಿ ಮೂಡುಬಿದಿರೆ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಉಮಾನಾಥ ಎ.ಕೋಟ್ಯಾನ್ ಅವರು ಮೂಡುಬಿದಿರೆ ಜೈನ ಮಠದ ಸ್ವಸ್ತಿಶ್ರೀ ಚಾರುಕೀರ್ತಿ ಆಶೀರ್ವಾದ ಪಡೆದರು. ಭಟ್ಟಾರಕ ಪಂಡಿತಾಚಾರ್ಯವರ್ಯ ಮಹಾಸ್ವಾಮಿಯವರನ್ನು ಗುರುವಾರ ಭೇಟಿಯಾಗಿ ಫಲ ಮಂತ್ರಾಕ್ಷತೆ ಸ್ವೀಕರಿಸಿದರು.ಈ ಸಂದರ್ಭದಲ್ಲಿ ಬಿಜೆಪಿ ಮುಖಂಡ ಮೇಘನಾಥ ಶೆಟ್ಟಿ, ಎಂಸಿಎಸ್ ಬ್ಯಾಂಕಿನ ಅಧ್ಯಕ್ಷ ಎಂ.ಬಾಹುಬಲಿ ಪ್ರಸಾದ್ ಉಪಸ್ಥಿತರಿದ್ದರು.
