ಅಶ್ವತ್ಥಪುರದ ಶ್ರೀ ಸೀತಾರಾಮಚಂದ್ರ ದೇವಸ್ಥಾನಕ್ಕೆ ಉಮಾನಾಥ್ ಕೋಟ್ಯಾನ್ ಭೇಟಿ
ಮೂಡುಬಿದಿರೆಯ ಅಶ್ವತ್ಥಪುರದ ಶ್ರೀ ಸೀತಾರಾಮಚಂದ್ರ ದೇವಸ್ಥಾನದಲ್ಲಿ ನಡೆದ ಶ್ರೀ ದೇವಸ್ಥಾನದ ಅಷ್ಟೊತ್ತರ ಶತಮಾನೋತ್ಸವ, ಗೋಶಾಲೆ ಉದ್ಘಾಟನೆ, ಶ್ರೀಗುರುಭವನದ ಶಿಲಾನ್ಯಾಸ ಹಾಗೂ ಶ್ರೀ ಶತಚಂಡಿಕಾ ಹವನದಲ್ಲಿ ಮೂಲ್ಕಿ ಮೂಡುಬಿದಿರೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಉಮಾನಾಥ್ ಕೋಟ್ಯಾನ್ ಅವರು ಭಾಗವಹಿಸಿದರು.ಈ ಸಂದರ್ಭದಲ್ಲಿ ಶೃಂಗೇರಿ ಜಗದ್ಗುರು ಪೀಠದ ಶ್ರೀ ಶ್ರೀ ಶ್ರೀ ವಿಧುಶೇಖರ ಭಾರತಿ ಸ್ವಾಮೀಜಿಯವರಿಂದ ಫಲ ಮಂತ್ರಾಕ್ಷತೆ ಸ್ವೀಕರಿಸಿದರು.



















