ಉಮಾನಾಥ ಕೋಟ್ಯಾನ್ ಬಗ್ಗೆ ಕಾಂಗ್ರೆಸ್‍ನಿಂದ ಅಪಪ್ರಚಾರ : ಉಮೇಶ್ ಪೈ ಹೇಳಿಕೆ UMANATH KOTIAN

ಮೂಡುಬಿದಿರೆ : ಬಿಜೆಪಿ ಅಭ್ಯರ್ಥಿ ಉಮಾನಾಥ ಕೋಟ್ಯಾನ್ ಅವರು ಎಲ್ಲಾ ಸಮುದಾಯಗಳಿಗೂ ಸಮಾನ ಆದ್ಯತೆ ನೀಡಿದ್ದು ಊರಿನ ಪ್ರಗತಿಗಾಗಿ ದೊಡ್ಡ ಕೊಡುಗೆ ನೀಡಿದ್ದಾರೆ. ಜಾತಿಮತ ಬೇಧವಿಲ್ಲದೆ ಸ್ಪಂದಿಸಿದ್ದಾರೆ. ಈಗ ಅವರ ವಿರುದ್ದ ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ ನಡೆಸಿ ಮತದಾರರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಇದಕ್ಕೆ ಯಾರೂ ಕಿವಿಗೊಡದೆ ಆತ್ಮಸಾಕ್ಷಿಯಾಗಿ ಮತಚಲಾಯಿಸಬೇಕು ಎಂದು ಹುನುಮಂತ, ವೆಂಕಟರಮಣ ದೇವಳಗಳ ಆಡಳಿತ ಮೊಕ್ತೇಸರ ಜಿ ಉಮೇಶ್ ಪೈ ಹೇಳಿದರು.

ಕಾಂಗ್ರೆಸ್ ನಾಯಕರು ಬಿಜೆಪಿಯ ಅಭ್ಯರ್ಥಿ ಉಮಾನಾಥ ಕೋಟ್ಯಾನ್ ಅವರ ಬಗ್ಗೆ ಇಲ್ಲಸಲ್ಲದ ಸುಳ್ಳು ಪ್ರಚಾರ ನಡೆಸಿ ಸಮುದಾಯಗಳ ನಡುವೆ ಒಡಕು ಸೃಷ್ಠಿಸುವ ಕೆಲಸ ಮಾಡುತ್ತಿದ್ದು ಇದಕ್ಕೆ ವಿವಿಧ ಸಮುದಾಯಗಳ ಮುಖಂಡರು ಶುಕ್ರವಾರ ಆಲಂಗಾರಿನಲ್ಲಿ ನಡೆಸಿದ ಜಂಟಿ ಪತ್ರಿಕಾಗೋಷ್ಟಿಯಲ್ಲಿ ಅವರು ಮಾತನಾಡಿ ಆಕ್ಷೇಪವೆತ್ತಿದ್ದಾರೆ.

ಉದ್ಯಮಿ, ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಅಧ್ಯಕ್ಷ ಕೆ. ಶ್ರೀಪತಿ ಭಟ್ ಮಾತನಾಡಿ ಚುನಾವಣೆಯ ನೆಪದಲ್ಲಿ ಸಮುದಾಯಗಳ ನಡುವೆ ಬಿರುಕು ಮೂಡಿಸಲು ಯಾರೂ ಪ್ರಯತ್ನಿಸಬಾರದು. ಈ ಬಗ್ಗೆ ಮತದಾರರೂ ಜಾಗೃತರಾಗಬೇಕು. ಎಲ್ಲರೂ ಕಡ್ಡಾಯವಾಗಿ ಮತದಾನ ಮಾಡಬೇಕು ಎಂದರು.

ಆನೆಗುಂದಿ ಸಂಸ್ಥಾನ ಸರಸ್ವತಿ ಪೀಠದ ಕೋಶಾಧಿಕಾರಿ ಅರವಿಂದ ವೈ ಆಚಾರ್ಯ, ಗುರುಮಠ ಕಾಳಿಕಾಂಬಾ ದೇವಸ್ಥಾನದ ಮೊಕ್ತೇಸರ ಬಾಲಕೃಷ್ಣ ಆಚಾರ್ಯ, ಸೇವಾ ಸಮಿತಿಯ ಅಧ್ಯಕ್ಷ ಹರಿಶ್ಚಂದ್ರ ಆಚಾರ್ಯ, ವೆಂಕಟರಮಣ , ಹನುಮಂತ ದೇವಳಗಳ ಟ್ರಸ್ಟಿ ಶಾಂತಾರಾಮ ಕುಡ್ವ, ಹಿರಿಯ ಉದ್ಯಮಿ ಆರ್.ಕೆ. ಭಟ್ ಮತ್ತಿತರರು ಉಪಸ್ಥಿತರಿದ್ದರು.

Related Posts

Leave a Reply

Your email address will not be published.