Header Ads
Breaking News

ಏ.22ರಿಂದ 24ರವರೆಗೆ ಪಡುಮಲೆಯಲ್ಲಿ ಪ್ರತಿಷ್ಠೆ ಮತ್ತು ಬ್ರಹ್ಮಕಲಶಾಭಿಷೇಕ

ತುಳುನಾಡಿನ ಕಾರಣಿಕ ಶಕ್ತಿಗಳಾದ ಕೋಟಿ ಚೆನ್ನಯರ ಜನ್ಮಸ್ಥಾನ ಪಡುಮಲೆಯಲ್ಲಿ ಇದೇ ತಿಂಗಳ 22ರಿಂದ 24ರವರೆಗೆ ಪ್ರತಿಷ್ಠೆ ಮತ್ತು ಬ್ರಹ್ಮಕಲಶಾಭಿಷೇಕ ನಡೆಯಲಿದೆ ಎಂದು ಪಡುಮಲೆ ಕೋಟಿ ಚೆನ್ನಯ ಜನ್ಮಸ್ಥಾನ ಸಂಚಲನ ಸೇವಾ ಟ್ರಸ್ಟ್ ಅಧ್ಯಕ್ಷ ಕೆ. ಹರಿಕೃಷ್ಣ ಬಂಟ್ವಾಳ್ ಹೇಳಿದರು.

ಅವರು ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಧರ್ಮಸ್ಥಳ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಅವರ ಆಶೀರ್ವಾದದಲ್ಲಿ ಕುಂಟಾರು ವೇದಮೂರ್ತಿ ರವೀಶ್ ತಂತ್ರಿ ಅವರ ನೇತೃತ್ವದಲ್ಲಿ ವಿವಿಧ ವೈದಿಕ, ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ ಎಂದು ಬಂಟ್ವಾಳ್ ಮಾಹಿತಿ ನೀಡಿದರು. ಸುದ್ದಿಗೋಷ್ಠಿಯಲ್ಲಿ ಕ್ಷೇತ್ರದ ಆಡಳಿತ ಮೊಕ್ತೇಸರ ವಿನೋದ್ ಆಳ್ವ, ಗೌರವಾಧ್ಯಕ್ಷ ರುಕ್ಮಯ ಪೂಜಾರಿ, ಉಪಾಧ್ಯಕ್ಷ ವಿಜಯ ಕುಮಾರ್ ಸೊರಕೆ ಮತ್ತಿತರರು ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *