Header Ads
Breaking News

ಕಾಡಾನೆ ದಾಳಿಗೆ ವ್ಯಕ್ತಿ ಬಲಿ

ಇತ್ತೀಚೆಗೆ ಹಾಸನ ಜಿಲ್ಲೆಯಲ್ಲಿ ಕಾಡಾನೆಗಳ ದಾಳಿ ಹೆಚ್ಚಾಗಿದ್ದು ಮಲೆನಾಡು ಪ್ರದೇಶಗಳಲ್ಲಿ ವಾಸವಾಗಿರುವ ಜನತೆ ಜೀವನ ನಡೆಸುವುದೇ ಕಷ್ಟವಾಗುತ್ತಿದೆ. ದಿನ ಬೆಳ್ಳಂಬೆಳಿಗ್ಗೆ ಆನೆಗಳ ಹಾವಳಿ ಹೆಚ್ಚಾಗಿದ್ದು ರೈತರು ಬೆಳೆದ ಬೆಳೆ ನಾಶವಾಗಿದ್ದು ಅಲ್ಲದೆ ಅಮಾಯಕರ ಜೀವವನ್ನು ಕಳೆದುಕೊಳ್ಳುತ್ತಿದ್ದಾರೆ. ಇದಕ್ಕೆ ನಿದರ್ಶನವೆಂಬಂತೆ ಇಂದು ಬೆಳ್ಳಂಬೆಳಿಗ್ಗೆ ದಾಳಿ ಮಾಡಿದ ಕಾಡಾನೆ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ಅರೇಹಳ್ಳಿ ಹೋಬಳಿ ಗ್ರಾಮದ ನಿವಾಸಿಯೊಬ್ಬರ ಮೇಲೆ ಎರಗಿ ಜೀವವನ್ನು ತೆಗೆದಿದೆ. ಇದನ್ನು ಕಂಡ ಗ್ರಾಮಸ್ಥರು ಅರಣ್ಯ ಅಧಿಕಾರಿಗಳು ಇದಕ್ಕೆಲ್ಲಾ ಪರಿಹಾರವನ್ನು ನೀಡದೆ ಅಮಾಯಕ ಜನರ ಜೀವದ ಜೊತೆ ಆಟವಾಡುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸರ್ಕಾರ ಕಾಡಾನೆ ದಾಳಿಯನ್ನು ತಡೆಗಟ್ಟಲು ಹಲವಾರು ಯೋಜನೆಗಳನ್ನು ಕೋಟ್ಯಂತರ ರೂಪಾಯಿ ಹಣವನ್ನು ವ್ಯಯಿಸಿದರೂ ಕೂಡ ಯಾವುದೇ ಪ್ರಯೋಜನವಾಗುತ್ತಿಲ್ಲ ನಮಗೆ ಆಗುತ್ತಿರುವ ಕಷ್ಟ ಮಾತ್ರ ತಪ್ಪಿಸಲು ಸಾಧ್ಯವಾಗುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

 

Related posts

Leave a Reply

Your email address will not be published. Required fields are marked *