Header Ads
Breaking News

ಕಾರ್ಯನಿರತ ಪತ್ರಕರ್ತರಿಗೆ ಕೋವಿಡ್ ಲಸಿಕೆ

 

ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಜಿಲ್ಲಾ ಆರೋಗ್ಯ ಇಲಾಖೆ ಸಹಕಾರದೊಂದಿಗೆದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಪ್ರೆಸ್‍ಕ್ಲಬ್ ಮತ್ತು ಪ್ರತಿಕಾಭವನ ಟ್ರಸ್ಟ್ ಸಹಯೋಗದೊಂದಿಗೆ ಕಾರ್ಯನಿರತ ಪತ್ರಕರ್ತರಿಗೆ ಕೋವಿಡ್ ಲಸಿಕಾ ಕಾರ್ಯಕ್ರಮವನ್ನ ಹಮ್ಮಿಕೊಳ್ಳಲಾಗಿತ್ತು.

ನಗರದ ಲೇಡಿಹಿಲ್‍ನಲ್ಲಿರುವ ಪ್ರೆಸ್‍ಕ್ಲಬ್‍ನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಕೋವಿಡ್ ಲಸಿಕೆಗೆ ಚಾಲನೆ ನೀಡಿದ್ರು. ಬಳಿಕ ಮಾತನಾಡಿದ ಅವರು, ಸರ್ಕಾರವು ಪತ್ರಕರ್ತರನ್ನು ಫ್ರಂಟ್ ಲೈನ್ ಕೋವಿಡ್ ವಾರಿಯರ್ಸ್ ಎಂದು ಪರಿಗಣಿಸಲಾಗಿದೆ. ಹಾಗಾಗಿ ಜಿಲ್ಲೆಯ ಎಲ್ಲಾ ಪತ್ರಕರ್ತರಿಗೆ ಕೋವಿಡ್ ವ್ಯಾಕ್ಸಿನ್ ಹಾಕಲಾಗಿದೆ. ಬಹುತೇಕ ಎಲ್ಲಾ ಮಾಧ್ಯಮದ ಪ್ರತಿನಿಧಿಗಳು ಸಾರ್ವಜನಿಕರ ಜೀವನ ಮಧ್ಯೆಯಲ್ಲಿ ಓಡಾಟ ಮಾಡುತ್ತಿದ್ದಾರೆ. ಹಾಗಾಗಿ ಪತ್ರಕರ್ತರಿಗೆ ಕೋವಿಡ್ ಲಸಿಕೆ ಅನಿವಾರ್ಯತೆ ಇದೆ. ಸುಮಾರು 125ಕ್ಕೂ ಅಧಿಕ ಮಂದಿ ಪತ್ರಕರ್ತರು ಲಸಿಕೆಯನ್ನು ಹಾಕಿಸಿಕೊಂಡಿದ್ದಾರೆ ಎಂದು ಅವರು ಹೇಳಿದರು. ಈ ವೇಳೆ ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ., ಜಿಲ್ಲಾ ಆರೋಗ್ಯಾಧಿಕಾರಿ ಡಾ| ರಾಜೇಶ್ ಕುಮಾರ್, ಪ್ರೆಸ್‍ಕ್ಲಬ್ ಅಧ್ಯಕ್ಷ ಅನ್ನು ಮಂಗಳೂರು, ಪ್ರತಿಕಾಭವನ ಟ್ರಸ್ಟ್ ಅಧ್ಯಕ್ಷ ಕೆ.ಆನಂದ್ ಶೆಟ್ಟಿ., ಪತ್ರಕರ್ತರಾದ ಸುಖ್‍ಪಾಲ್ ಪೊಳಲಿ, ಪುಷ್ಪರಾಜ್,ಸುರೇಶ್‍ಪಳ್ಳಿ., ಭಾಸ್ಕರ್ ರೈ , ವಿಜಯ್ ಕೋಟ್ಯಾನ್, ರಾಮಕೃಷ್ಣ, ಮತ್ತಿತರರು ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *