Header Ads
Breaking News

ಮಾಡ ಅರಸು ದೈವಗಳ ಜಾತ್ರೋತ್ಸವ : ಉದ್ಯಾವರ ಸಾವಿರ ಜಮಾಅತ್ ಮಸೀದಿಗೆ ಆಹ್ವಾನ

ಹಿಂದೂ ಮುಸ್ಲಿಂ ಭಾವೈಕ್ಯದ ಸಂಕೇತದೊಂದಿಗೆ ಕಳೆದ 800 ವರ್ಷಗಳಿಂದ ವಾಡಿಕೆಯಲ್ಲಿರುವ ಉದ್ಯಾವರ ಶ್ರೀ ಅರಸು ದೈವಗಳು ವರ್ಷಂಪ್ರತಿಯ ವಾಡಿಕೆಯಂತೆ ಶುಕ್ರವಾರ ಮಧ್ಯಾಹ್ನ ಅರಸು ದೈವಪಾತ್ರಿಗಳು ಮತ್ತು ದೇವಸ್ಥಾನದ ಪ್ರತಿನಿಧಿಗಳು ಹಾಗು ಸಹಸ್ರಾರು ಹಿಂದೂ ಬಾಂಧವರು ಜೊತೆಯಾಗಿ ಉದ್ಯಾವರ ಸಾವಿರ ಜಮಾಅತ್ ಮಸೀದಿಗೆ ಭೇಟಿ ನೀಡಿದರು.

ಉದ್ಯಾವರ ಅರಸು ಮಂಜಿಷ್ಣಾರ್ ಕ್ಷೇತ್ರದ ವಾರ್ಷಿಕ ಜಾತ್ರೋತ್ಸವದ ಸಲುವಾಗಿ ಪ್ರಾಚೀನ ಕಾಲದಿಂದಲೇ ನಡೆದುಕೊಂಡು ಬರುತ್ತಿರುವ ಅರಸು ದೈವಗಳ ಜಮಾಅತ್ ಭೇಟಿ ಇಂದಿಗೂ ಹಿಂದೂ ಮುಸ್ಲಿಂ ಬಾವೈಕ್ಯತೆಗೊಂದು ಪ್ರತೀಕವಾಗಿದೆ. ಮೇಷ ಸಂಕ್ರಮಣ ಕಳೆದು ಬರುವ ಮೊದಲ ಶುಕ್ರವಾರ ಈ ಅನುಷ್ಟಾನ ವಾಡಿಕೆಯಾಗಿದೆ. ಇದರಂತೆ ಶುಕ್ರವಾರ ಮಧ್ಯಾಹ್ನಉದ್ಯಾವರ ಕ್ಷೇತ್ರದ ಭಂಡಾರ ಮನೆಯಿಂದ ಹೊರಟ ದೈವಗಳು 1.40 ರ ಹೊತ್ತಿಗೆ ಜಮಾಅತ್ ಗೆ ತಲುಪಿದವು. ಈ ವೇಳೆ ಜುಮಾ ನಮಾಝ್ ಮುಗಿಸಿ ಸಜ್ಜಾಗಿ ನಿಂತಿದ್ದ ಮಸೀದಿಯ ಆಡಳಿತ ಸಮಿತಿಯ ಪ್ರತಿನಿಧಿಗಳು ಹಾಗು ಸಹಸ್ರಾರು ಮುಸ್ಲಿಂ ಬಾಂಧವರು ಪರಂಪರಾಗತ ರೀತಿಯಲ್ಲಿ ಉದ್ಯಾವರ ಅರಸುದೈವ ಪಾತ್ರಿಗಳಿಗೆ ಅದ್ದೂರಿಯ ಸ್ವಾಗತ ನೀಡಿದರು. ದೈವ ಪಾತ್ರಿಗಳು ಜಮಾಅತಿನೊಳಗೆ ಪ್ರವೇಶಿಸಿ ಮಸೀದಿ ಮುಂಭಾಗದಲ್ಲಿ ಜಮಾಅತಿನ ಸರ್ವ ಮುಸ್ಲಿಂ ಬಾಂಧವರನ್ನು ಕೂಡ ಮಾಡ ಅರಸು ದೈವಗಳ ಜಾತ್ರೋತ್ಸವಕ್ಕೆ ಆಹ್ವಾನವಿತ್ತಿತು. ಮೇ 8 ರಿಂದ 11 ರತನಕ ಮಾಡ ಕ್ಷೇತ್ರದ ಉತ್ಸವಕ್ಕೆ ಸಾವಿರ ಜಮಾಅತಿನ ವ್ಯಾಪ್ತಿಯಲ್ಲಿರುವ ಎಲ್ಲಾ ಮುಸ್ಲಿಂ ಬಾಂಧವರು ಕೂಡಾ ಪಾಲ್ಗೊಳ್ಳುವುದು ಇಲ್ಲಿಯ ವಿಶೇಷತೆಯಾಗಿದೆ.
ಜಮಾಅತ್ ಭೇಟಿಗೆ ಉದ್ಯಾವರ ಸಾವಿರ ಜಮಾಅತ್ ನಲ್ಲಿ ಹನೀಫ್ ಪಿ ಎ, ಟಿ ಎಸ್ ಸಯ್ಯದ್, ಆಸಿಫ್, ಪೊಡಿಯ ಮೊದಲಾದವರ ನೇತೃತ್ವದಲ್ಲಿ ಬರ ಮಾಡಿಕೊಳ್ಳಲಾಯಿತು. ಉದ್ಯಾವರ ಶ್ರೀ ಅರಸು ದೈವಗಳ ಮುಖ್ಯಸ್ಥರಾದ ದಯಾಕರ ಮಾಡ, ದುಗ್ಗ ಭಂಡಾರಿ, ನಾರಾಯಣಗುರಿಕ್ಕಾರ, ಪದ್ಮಗುರಿಕ್ಕಾರ ಸಂಜೀವ ಶೆಟ್ಟಿ, ಹರೀಶ್ ಶೆಟ್ಟಿ ಮಾಡ, ಹಾಗೂ ಎರಡು ವರ್ಣ ನಾಲ್ಕು ಗ್ರಾಮದವರು ಸೇರಿದಂತೆ ಹಲವರು ಜಮಾಅತ್ ಭೇಟಿಯಲ್ಲಿ ಉಪಸ್ಥಿತರಿದ್ದರು.

Related posts

Leave a Reply

Your email address will not be published. Required fields are marked *