ಆಳ್ವಾಸ್‌ ನ ಇಬ್ಬರು ಕ್ರೀಡಾಪಟುಗಳು ಟೋಕಿಯೊ ಒಲಿಂಪಿಕ್ಸ್ ಗೆ ಆಯ್ಕೆ

ಮೂಡುಬಿದಿರೆ: ಜುಲೈ 23ರಿಂದ ಜಪಾನಿನ ಟೋಕಿಯೋ ಒಲಂಪಿಕ್ಸ್ ಕ್ರೀಡಾಕೂಟ ಕ್ಕೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಇಬ್ಬರು ಕ್ರೀಡಾ ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ ಮೋಹನ ಆಳ್ವ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.


ಆಳ್ವಾಸ್‌ನ ಕ್ರೀಡಾ ವಿಭಾಗ ದತ್ತು ಶಿಕ್ಷಣದ ಅಡಿಯಲ್ಲಿ ವ್ಯಾಸಂಗ ಮಾಡುತ್ತಿರುವ ಧನಲಕ್ಷಿ ಹಾಗೂ ಶುಭ ಇವರು 4*400 ಮಿಕ್ಸಡ್  ರಿಲೇಯಲ್ಲಿ ದೇಶದ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ. 2016-17 ನೇ ಶೈಕ್ಷಣಿಕ ವರ್ಷದಿಂದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವಿದ್ಯಾರ್ಥಿಗಳಾಗಿ ಮಂಗಳೂರು ವಿಶ್ವವಿದ್ಯಾನಿಲಯ ಹಾಗೂ ಅಖಿಲಭಾರತ ಅಂತರ್ ವಿಶ್ವವಿದ್ಯಾನಿಲಯಕೂಟಗಳಲ್ಲಿ ಪ್ರತಿನಿಧಿಸಿದ್ದರು. 

ಆಳ್ವಾಸ್ ವಿದ್ಯಾಸಂಸ್ಥೆಯ ಹಲವಾರು ಕ್ರೀಡಾವಿದ್ಯಾರ್ಥಿಗಳು ಈಗಾಗಲೇ ಒಲಂಪಿಕ್ಸ್ ನಲ್ಲಿ  ಭಾಗವಹಿಸಿ ಸಾಧನೆ ಮಾಡಿದ್ದು ಈ ಬಾರಿಯ ಒಲಿಂಪಿಕ್ಸ್ ಗೆ ಆಯ್ಕೆಯಾದ ಇಬ್ಬರು ಪ್ರತಿಭಾನ್ವಿತ ಕ್ರೀಡಾ ವಿದ್ಯಾರ್ಥಿಗಳಿಗೆ ಡಾ.ಎಂ. ಮೋಹನ ಆಳ್ವರು ತಲಾ 1ಲಕ್ಷ ರೂಪಾಯಿಗಳ ಪ್ರೋತ್ಸಾಹಧನ ನೀಡಿದ್ದಾರೆ.

Related Posts

Leave a Reply

Your email address will not be published.