ಕೊರೊನಾ ನಿಯಂತ್ರಣಕ್ಕೆ ಅಗತ್ಯ ಕ್ರಮ:ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ನಿಯಂತ್ರಣಕ್ಕೆ ಸರ್ಕಾರ ಅಗತ್ಯ ಕ್ರಮ ಕೈಗೊಂಡಿದ್ದು, ಕೊರೊನಾ ನಿರ್ವಹಣೆಗೆ ಮೂಲಸೌಕರ್ಯ ಕಲ್ಪಿಸಲು ಹಲವು ಕ್ರಮಗಳನ್ನು ತೆಗೆದುಕೊಂಡಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಕೊರೊನಾ ಸೋಂಕಿನ ಪ್ರಮಾಣ ಕಡಿಮೆ ಇರುವ ಜಿಲ್ಲೆಗಳಲ್ಲಿ ಇದೇ ತಿಂಗಳ 23ರಿಂದ ಶಾಲೆಗಳನ್ನು ಆರಂಭಿಸಲು ತೀರ್ಮಾನಿಸಲಾಗಿದೆ. ಆದರೆ, ಕೋವಿಡ್ ಪಾಸಿಟಿವ್ ದರ ಹೆಚ್ಚಿರುವ ದಕ್ಷಿಣ ಕನ್ನಡ, ಕೊಡಗು, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಬೆಂಗಳೂರು ಗ್ರಾಮಾಂತರ ಹೆಚ್ಚಿರುವ ಜಿಲ್ಲೆಗಳಲ್ಲಿ ಶಾಲೆಗಳನ್ನು ಆರಂಭಿಸದಿರಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ.

ಬೆಂಗಳೂರಿನಲ್ಲಿಂದು ನಡೆದ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯಮಂತ್ರಿಯವರು, ಮುಂದಿನ ಮೂರು ವಾರಗಳಲ್ಲಿ ಬೆಂಗಳೂರು, ಮೈಸೂರು, ಶಿವಮೊಗ್ಗ, ಕಲಬುರಗಿ, ಬೆಳಗಾವಿ, ಹುಬ್ಬಳ್ಳಿಯಲ್ಲಿ ಸೇರಿದಂತೆ ರಾಜ್ಯದ ಆರು ಕಡೆಗಳಲ್ಲಿ ಜಿನೋಮ್ ಟೆಸ್ಟಿಂಗ್ ಲ್ಯಾಬ್‌ಗಳನ್ನು ಸ್ಥಾಪಿಸಲಾಗುವುದು ಎಂದು ಹೇಳಿದರು.

ಕೋವಿಡ್ ನಿರ್ವಹಣೆ ಇಡೀ ರಾಜ್ಯದ ಬದಲು ಈಗ ಜಿಲ್ಲಾವಾರು ಯೋಜನೆಗಳನ್ನು ರೂಪಿಸಲಾಗುವುದು ಎಂದು ತಿಳಿಸಿದ ಬಸವರಾಜ ಬೊಮ್ಮಾಯಿ, ಕೇರಳ ಮತ್ತು ಮಹಾರಾಷ್ಟ್ರಗಳ ಗಡಿ ಜಿಲ್ಲೆಗಳ ಜೊತೆಗೆ ಗಡಿಗ್ರಾಮಗಳಲ್ಲಿ ಅಗತ್ಯ ಮುನ್ನಚ್ಚರಿಕೆ ವಹಿಸಲಾಗಿದೆ ಎಂದರು.

Related Posts

Leave a Reply

Your email address will not be published.