ದಲಿತ ಕವಿ ಡಾ. ಸಿದ್ದಲಿಂಗಯ್ಯ ರವರಿಗೆ ಗೌರವಪೂರ್ಣ ವಿದಾಯ

ದಲಿತ ಕವಿ, ಹಿರಿಯ ಸಾಹಿತಿ ಡಾ.ಸಿದ್ದಲಿಂಗಯ್ಯನವರಿಗೆ ಅಂತಿಮ ವಿದಾಯ ಹೇಳಲಾಗಿದೆ. ಬೆಂಗಳೂರಿನ ಜ್ಞಾನಭಾರತಿಯ ಕಲಾಗ್ರಾಮದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಹಿರಿಯ ಸಾಹಿತಿ, ಕವಿ ಡಾ.ಸಿದ್ದಲಿಂಗಯ್ಯನವರ ಅಂತ್ಯಕ್ರಿಯೆಯನ್ನು ನೆರವೇರಿಸಲಾಯಿತು. ರಾಷ್ಟ್ರಕವಿ ಪ್ರೊ. ಜಿ.ಎಸ್.ಶಿವರುದ್ರಪ್ಪ ಅವರ ಸಮಾಧಿ ಪಕ್ಕದಲ್ಲೇ ಡಾ.ಸಿದ್ದಲಿಂಗಯ್ಯನವರ ಅಂತ್ಯಸಂಸ್ಕಾರ ನಡೆಸಲಾಯಿತು. ಮೂರು ಸುತ್ತಿನ ಕುಶಾಲತೋಪು ಸಿಡಿಸಿ ಗೌರವ ನಮನ ಸಲ್ಲಿಸಲಾಯಿತು. ಬೌದ್ಧ ಧರ್ಮದ ವಿಧಿ-ವಿಧಾನಗಳಂತೆ ಅಂತಿಮ ಸಂಸ್ಕಾರ ನಡೆಸಲಾಯಿತು. ಅಂತ್ಯಕ್ರಿಯೆಯಲ್ಲಿ ಬೌದ್ಧ ಬಿಕ್ಕುಗಳು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಸರ್ಕಾರದ ಪರವಾಗಿ ಡಿಸಿಎಂ ಅಶ್ವತ್ಥ ನಾರಾಯಣ್, ಶಾಸಕ ಮುನಿರತ್ನ, ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಭಾಗವಹಿಸಿದ್ದರು. ಕವಿಯ ಅಗಲಿಕೆಗೆ ಇಡೀ ಕರುನಾಡಿನ ಜನರೇ ಕಂಬಿನಿ ಮಿಡಿದಿದ್ದಾರೆ. ಸಿಎಂ ಬಿಎಸ್ ಯಡಿಯೂರಪ್ಪ ಸೇರಿ ಹಲವು ಗಣ್ಯರು ಡಾ.ಸಿದ್ದಲಿಂಗಯ್ಯ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಕೂಡ ಕರ್ನಾಟಕದ ಸಾಹಿತಿ ಅಗಲಿಕೆಗೆ ಸಂತಾಪ ವ್ಯಕ್ತಪಡಿಸಿದ್ದಾರೆ.

ದಲಿತ ಕವಿ ಡಾ.ಸಿದ್ದಲಿಂಗಯ್ಯ ಅವರು, ’ಹೊಲೆಮಾದಿಗರ ಹಾಡು’ ’ಮೆರವಣಿಗೆ’, ಸಾವಿರಾರು ನದಿಗಳು’ ’ಕಪ್ಪು ಕಾಡಿನ ಹಾಡು’, ’ನನ್ನ ಜನಗಳು’ ಸೇರಿದಂತೆ ಹಲವು ಕವನ ಸಂಕಲಗಳನ್ನು ಹೊರತಂದಿದ್ದಾರೆ. ’ಊರು-ಕೇರಿ’ ಎಂಬ ಆತ್ಮಕಥನವನ್ನು ರಚಿಸಿದ್ದಾರೆ. ಪಂಪ ಪ್ರಶಸ್ತಿ, ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ನಾಡೋಜ, ನೃಪತುಂಗ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿ ಹಾಗೂ ಗೌರವಗಳು ಅವರಿಗೆ ದೊರೆತಿವೆ.

’ದಲಿತ ಕವಿ’ ಎಂದೇ ಪ್ರಸಿದ್ಧರಾದ ಸಿದ್ಧಲಿಂಗಯ್ಯನವರು ದಲಿತ ಹೋರಾಟ ಮತ್ತು ಸಾಮಾಜಿಕ ಸಮಾನತೆಗಾಗಿ ಕಾವ್ಯ ಸಾಹಿತ್ಯಗಳನ್ನು ರಚಿಸಿದವರು. ಕಾವ್ಯ, ನಾಟಕ, ಪ್ರಬಂಧ, ವಿಮರ್ಶೆ, ಸಂಶೋಧನೆ, ಆತ್ಮಕಥನ ಮುಂತಾದ ಪ್ರಕಾರಗಳಲ್ಲಿ ಸಾಹಿತ್ಯ ರಚನೆ ಮಾಡಿದವರು. ಎರಡು ಬಾರಿ ವಿಧಾನಪರಿಷತ್ತಿನ ಸದಸ್ಯರಾಗಿದ್ದರು. ಅಧ್ಯಾಪನ-ಬರವಣಿಗೆಗಳಲ್ಲಿ ತೊಡಗಿಕೊಂಡಿದ್ದರು.

 

 

Related Posts

Leave a Reply

Your email address will not be published.