ಹದಗೆಟ್ಟ ಕಾನ-ಕುಳಾಯಿ ರೈಲ್ವೆ ಸೇತುವೆ ದುರಸ್ತಿಗೆ ಡಿವೈಎಫ್‌ಐ ಪ್ರತಿಭಟನೆ

ಮಂಗಳೂರು : ಬೃಹತ್ ಘನ ವಾಹನಗಳ ಸಂಚಾರದಿಂದಾಗಿ ಕಾನ ಕುಳಾಯಿ ರೈಲ್ವೆ ಸೇತುವೆ ಸಂಪೂರ್ಣ ಹದಗೆಟ್ಟು ಹೋಗಿದ್ದು ಕೂಡಲೇ ದುರಸ್ಥಿ ಮಾಡಲು ಒತ್ತಾಯಿಸಿ ಡಿವೈಎಫ್‌ಐ ಕಾನ ಮತ್ತು ಕುಳಾಯಿ ಘಟಕಗಳ ನೇತೃತ್ವದಲ್ಲಿ ಇಂದು ಕುಳಾಯಿ ರೈಲ್ವೆ ಸೇತುವೆ ಮೇಲೆ ರಸ್ತೆತಡೆ ಪ್ರತಿಭಟನೆ ನಡೆಯಿತು

ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಡಿವೈಎಫ್‌ಐ ರಾಜ್ಯ ಅಧ್ಯಕ್ಷರಾದ ಮುನೀರ್ ಕಾಟಿಪಳ್ಳ ಮಾತನಾಡುತ್ತಾ ಜನಪ್ರತಿನಿದಿನಗಳ ಮತ್ತು ಪಾಲಿಕೆ ಅಧಿಕಾರಿಗಳ ನಿರ್ಲಕ್ಷ್ಯತನದಿಂದಾಗಿ ರೈಲ್ವೆ ಸೇತುವೆ ಸಂಪೂರ್ಣ ಹಾಳಾಗಿ ಹೋಗಿದೆ ಧೂಳು ಮತ್ತು ಕೆಸರಿನಿಂದ ಜನ ನಡೆದಾಡಲು ಆಗದ ಸ್ಥಿತಿ ತಲುಪಿದೆ. ಅವೈಜ್ಞಾನಿಕ ರಸ್ತೆ ನಿರ್ಮಾಣ ಮಾಡಿ ಡಿವೈಡರ್ ಹಾಕುವಲ್ಲಿ ಇಂಟರ್ ಲಾಕ್ ಅಳವಡಿಸಿರುವುದರಿಂದ ದ್ವಿಚಕ್ರ ಸವಾರರು ನಿಯಂತ್ರಣ ತಪ್ಪಿ ಅಪಘಾತಕ್ಕೆ ಒಳಗಾಗುತ್ತಿದ್ದಾರೆ.ಕ್ಷೇತ್ರದ ಶಾಸಕರು ಮತ್ತು ಕಾರ್ಪೊರೇಟರುಗಳು ಜನರ ಮೂಲಭೂತ ಸಮಸ್ಯೆ ಬಗೆಹರಿಸುವ ಬದಲು ಜನರನ್ನು ಭಾವನಾತ್ಮಕವಾಗಿ ವಿಂಗಡಿಸುವ ಕೆಲಸದಲ್ಲಿ ನಿರತರಾಗಿದ್ದಾರೆ ಎಂದು ಹೇಳಿದರು.ಡಿವೈಎಫ್‌ಐ ಜಿಲ್ಲಾಧ್ಯಕ್ಷರಾದ ಬಿ.ಕೆ ಇಮ್ತಿಯಾಜ್, ಕಾನ ಕುಳಾಯಿ ಘಟಕದ ಪ್ರಮುಖರಾದ ಮೊಹಮ್ಮದ್, ಜೋಯ್, ಮುಸ್ತಫಾ ಅಂಗರಗುಂಡಿ, ನವಾಜ್ ಕುಲಾಯಿ, ಇಮ್ತಿಯಾಜ್ ಕುಳಾಯಿ, ಲಕ್ಷ್ಮೀಷ ಕುಳಾಯಿ,ಸಮದ್,ರಿಯಾಜ್ ದಾಜ್, ಅನ್ವರ್ ಆಲಿ, ಹಂಝ ಮೈಂದಗುರಿ ಮೊದಲಾದವರು ಭಾಗವಹಿಸಿದ್ದರು.

 

 

Related Posts

Leave a Reply

Your email address will not be published.