ಉಪ್ಪಳ: ಮುಳಿಂಜ ಶಿವತೀರ್ಥಪದವಿನಲ್ಲಿ 44ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ
ಉಪ್ಪಳ ಮುಳಿಂಜ ಶಿವತೀರ್ಥಪದವಿನ ಸಾರ್ವಜನಿಕ ಗಣೇಶೋತ್ಸವ ಸಮಿತಿ ವತಿಯಿಂದ ಶ್ರೀ ಸಿದ್ದಿವಿನಾಯಕ ಸಾರ್ವಜನಿಕ ಸಂಸ್ಥೆಯ ಆಶ್ರಯದಲ್ಲಿ ೪೪ ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ನಡೆಯುತ್ತಿದೆ.
ಕಾರ್ಯಕ್ರಮದ ಪ್ರಯುಕ್ತ ವಿದ್ಯಾರ್ಥಿಗಳಿಗಾಗಿ ಹಾಗೂ ಸಾರ್ವಜನಿಕರಿಗಾಗಿ ವಿವಿಧ ಆಟೋಟ ಸ್ಪರ್ಧೆ, ಸಾಂಸ್ಕೃತಿಕ ಸ್ಪರ್ಧೆಗಳು ನಡೆಯಿತು. ವಿವಿಧ ವೈದಿಕ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ನಡೆಯುತ್ತಿದೆ.