ಉಪ್ಪಳ: ಮುಳಿಂಜ ಶಿವತೀರ್ಥಪದವಿನಲ್ಲಿ 44ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಂಪನ್ನ
ಉಪ್ಪಳ ಮುಳಿಂಜ ಶಿವತೀರ್ಥಪದವಿನ ಸಾರ್ವಜನಿಕ ಗಣೇಶೋತ್ಸವ ಸಮಿತಿ ವತಿಯಿಂದ ಶ್ರೀ ಸಿದ್ದಿವಿನಾಯಕ ಸಾರ್ವಜನಿಕ ಸಂಸ್ಥೆಯ ಆಶ್ರಯದಲ್ಲಿ 44 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ನಡೆಯಿತು.
ಕಾರ್ಯಕ್ರಮದ ಪ್ರಯುಕ್ತ ವಿದ್ಯಾರ್ಥಿಗಳಿಗಾಗಿ ಹಾಗೂ ಸಾರ್ವಜನಿಕರಿಗಾಗಿ ವಿವಿಧ ಆಟೋಟ ಸ್ಪರ್ಧೆ, ಸಾಂಸ್ಕೃತಿಕ ಸ್ಪರ್ಧೆಗಳು ನಡೆಯಿತು. ವಿವಿಧ ವೈದಿಕ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ನಡೆಯಿತು. ಶ್ರೀ ಗಣೇಶನ ಭವ್ಯವಾದ ಶೋಭಾ ಯಾತ್ರೆಯು ವಿವಿಧ ವೇಷಭೂಷಣ ಚೆಂಡೆ, ವಾದ್ಯಘೋಷಗಳೊಂದಿಗೆ ಮುಳಿಂಜ ಶಿವತೀರ್ಥಪದವಿನಿಂದ ಹೊರಟು ರಾಜರಸ್ತೆ ರೈಲೆ ಸ್ಟೇಷನ್ ರಸ್ತೆಯಿಂದಾಗು ಉಪ್ಪಳ ಶ್ರೀ ಅಯ್ಯಪ್ಪ ಸನ್ನಿಧಿಯ ಬಳಿ ಇರುವ ಸಿಂಧೂ ಸಮುದ್ರದಲ್ಲಿ ಜಲಸ್ತಂಭನಗೊಂಡಿತು.