ಉಪ್ಪಿನಂಗಡಿ ವಿದ್ಯಾರ್ಥಿ ಚಲಾಯಿಸುತ್ತಿದ್ದ ಬೈಕ್ ಡಿಕ್ಕಿ- ಪಾದಚಾರಿ ಸಾವು.
ಉಪ್ಪಿನಂಗಡಿ : ಪುತ್ತೂರಿನ ಕಾಲೇಜೊಂದರ ವಿದ್ಯಾರ್ಥಿ ಚಲಾಯಿಸುತಿದ್ದ ಬೈಕ್ ಅಪಘಾತಗೊಂಡು ಪಾದಚಾರಿಯೋರ್ವರು ಮೃತಪಟ್ಟ ಘಟನೆ ಉಪ್ಪಿನಂಗಡಿಯಲ್ಲಿ ಜೂ.22 ರಂದು ನಡೆದಿದೆ. ಉಪ್ಪಿನಂಗಡಿ ಬೆಳ್ತಂಗಡಿ ರಸ್ತೆಯ ಎಚ್ಎಮ್ ಆಡಿಟೋರಿಯಂ ಸಮೀಪ ಅಪಘಾತ ಸಂಭವಿಸಿದೆ.
ಪುತ್ತೂರಿನ ನೆಹರುನಗರ ವಿವೇಕಾನಂದ ಕಾಲೇಜಿನ ವಿದ್ಯಾರ್ಥಿ ಬೆಳ್ತಂಗಡಿಯ ಉಳಿ ಗ್ರಾಮದ ನಿತಿನ್ ಬೆಳಗ್ಗೆ ಕಾಲೇಜು ಬರುವಾಗ ಬೈಕ್ ಪಾದಚಾರಿ ಇಳಂತಿಲದ ಪೆರ್ನಾಂಡೀಸ್ (64 ವ.) ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ರಸ್ತೆಗೆ ಎಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದ ಪೆರ್ನಾಂಡೀಸ್ ಮಂಗಳೂರಿನ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಸಣ್ಣ ಪುಟ್ಟ ಗಾಯಗೊಂಡ ನಿತಿನ್ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪುತ್ತೂರು ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.