HomeFresh Newsಉಪ್ಪಿನಂಗಡಿ : ಟಯರ್ ರಿಸೋಲ್ ಸಂಸ್ಥೆಯಲ್ಲಿ ಬೆಂಕಿ, ಕಾರ್ಮಿಕ ಮೃತ್ಯು

ಉಪ್ಪಿನಂಗಡಿ : ಟಯರ್ ರಿಸೋಲ್ ಸಂಸ್ಥೆಯಲ್ಲಿ ಬೆಂಕಿ, ಕಾರ್ಮಿಕ ಮೃತ್ಯು

ಪುತ್ತೂರು ತಾಲೂಕಿನ ಉಪ್ಪಿನಂಗಡಿ ಟಯರ್ ರಿಸೋಲ್ ಸಂಸ್ಥೆಯೊಂದರಲ್ಲಿ ಏರ್ ಕಂಪ್ರೈಸರ್ ಸ್ಫೋಟಗೊಂಡು ಕಾರ್ಮಿಕ ಮೃತಪಟ್ಟ ಘಟನೆ ಉಪ್ಪಿನಂಗಡಿಯ ಗಾಂಧಿಪಾರ್ಕ್ ಬಳಿಯಲ್ಲಿ ಮಧ್ಯಾಹ್ನದ ವೇಳೆಗೆ ನಡೆದಿದೆ. ಉಪ್ಪಿನಂಗಡಿ ಗಾಂಧಿ ಪಾರ್ಕ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ ಇಂಡಿಯನ್ ಟಯರ್ ಅಂಗಡಿಯಲ್ಲಿ ಏರ್ ಕಂಪ್ರೆಸರ್ ಸ್ಫೋಟಗೊಂಡಿದ್ದು, ಘಟನೆಯಲ್ಲಿ ಆಲಂಕಾರು ಮೂಲದ ರಾಜೇಶ್ ಪೂಜಾರಿ (43) ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಏರ್ ಕಂಪ್ರೆಸರ್ ಸ್ಫೋಟಗೊಂಡು ಗಂಭೀರ ಗಾಯಗೊಂಡಿದ್ದ ರಾಜೇಶ್ ರನ್ನು ಪುತ್ತೂರು ಖಾಸಗಿ ಆಸ್ಪತ್ರೆಗೆ ಕರೆತರಲಾಯಿತಾದರೂ ಅದಾಗಲೇ ಅವರು ಮೃತಪಟ್ಟಿದ್ದರು ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಉಪ್ಪಿನಂಗಡಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments