ಖಂಬದಕೋಣೆ ರೈತ ಸೇವಾ ಸಹಕಾರಿ ಸಂಘದ ಮಹಾಸಭೆ

ಉಪ್ಪುಂದ: ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘ ಉಪ್ಪುಂದ ಇದರ 2021-22ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆಯು ಉಪ್ಪುಂದ ಶ್ರೀ ದುರ್ಗಾಪರಮೇಶ್ವರೀ ಸಭಾಭವನದಲ್ಲಿ ನಡೆಯಿತು.
ಸಂಘದ ಅಧ್ಯಕ್ಷ ಎಸ್.ಪ್ರಕಾಶ್‍ಚಂದ್ರ ಶೆಟ್ಟಿ ಮಾತನಾಡಿ ಸಾರ್ವಜನಿಕ ಸೇವೆಯಲ್ಲಿ ಸಂಘವು ವರ್ಷದಲ್ಲಿ ಎಲ್ಲ ವ್ಯವಹಾರಗಳಲ್ಲೂ ಗುರಿ ಮೀರಿದ ಸಾಧನೆಯನ್ನು ಮಾಡಿದೆ. ವರದಿ ವರ್ಷದಲ್ಲಿ ಸಂಘವು ರು.4.69ಕೋಟಿ ಲಾಭಗಳಿಸಿದ್ದು ಸದಸ್ಯರಿಗೆ ಶೇ.15 ಡಿವಿಡೆಂಡ್ ಘೋಷಿಸಿ, ತಾಲೂಕು ವ್ಯಾಪ್ತಿಗೆ ಸಾಲ ಸೌಲಭ್ಯ ಸಹಿತ ಸೇವೆಯ ವಿಸ್ತರಣೆ ಮಾಡುವ ಯೋಜನೆ ಹಮ್ಮಿಕೊಳ್ಳಲಾಗಿದೆ ಎಂದರು.

ವರದಿ ವರ್ಷದಲ್ಲಿ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‍ನ ವತಿಯಿಂದ ಜಿಲ್ಲಾ ಮಟ್ಟದ ಅತ್ಯುತ್ತಮ ಸಹಕಾರಿ ಸಂಘ ಪ್ರಶಸ್ತಿ ಹಾಗೂ ರೈತಸಿರಿ ರೈತ ಸೇವಾ ಒಕ್ಕೂಟಕ್ಕೆ ಜಿಲ್ಲಾ ಮಟ್ಟದ ಪ್ರಶಸ್ತಿ ಪಡೆದುಕೊಂಡಿದೆ.ಸಂಘದ 30 ಹಿರಿಯ ಸದಸ್ಯರಿಗೆ ರೈತಸಿರಿ ಗೌರವಾರ್ಪಣೆ ಅರ್ಪಿಸಲಾಯಿತು
ಈ ಸಂದರ್ಭ ಸಂಘದ ಉಪಾಧ್ಯಕ್ಷ ಈಶ್ವರ ಹಕ್ಲತೋಡ್, ನಿರ್ದೇಶಕರಾದ ಬಿ.ಎಸ್.ಸುರೇಶ ಶೆಟ್ಟಿ, ಬಿ.ರಘರಾಮ ಶೆಟ್ಟಿ, ಕೆ.ಮೋಹನ ಪೂಜಾರಿ, ವಿರೇಂದ್ರ ಶೆಟ್ಟಿ, ಮಂಜು ದೇವಾಡಿಗ, ಗುರುರಾಜ ಹೆಬ್ಬಾರ್, ಭರತ್ ದೇವಾಡಿಗ, ನಾಗರಾಜ ಖಾರ್ವಿ, ಹೂವ ನಾಯ್ಕ, ದಿನೀತಾ ಶೆಟ್ಟಿ, ಜಲಜಾಕ್ಷಿ, ಜಿಲ್ಲಾ ಬ್ಯಾಂಕ್ ಪ್ರತಿನಿ„ ಎಸ್.ರಾಜು ಪೂಜಾರಿ ಉಪಸ್ಥಿತರಿದ್ದರು.