ನಾಪತ್ತೆಯಾದ ಮೀನುಗಾರ ಪತ್ತೆಗೆ ತುರ್ತು ಕ್ರಮದ ಜತೆಗೆ ತುರ್ತು ಪರಿಹಾರದ ವ್ಯವಸ್ಥೆ: ಶಾಸಕ ಗುರುರಾಜ್ ಗಂಟಿಹೊಳೆ
ಬೈಂದೂರು: ಗಂಗೊಳ್ಳಿಯಲ್ಲಿ ಇಂದು ಬೆಳಗ್ಗೆ ಸಂಭವಿಸಿದ ದೋಣಿ ದುರಂತದಲ್ಲಿ ಒರ್ವ ಮೀನುಗಾರ ಅಪಾಯದಿಂದ ಪಾರಾಗಿದ್ದು ಮೂವರು ಮೀನುಗಾರರು ನಾಪತ್ತೆಯಾಗಿರು ಮಾಹಿತಿ ತಿಳಿದು ಬಂದಿದೆ. ಕಾಣೆಯಾಗಿರುವ ಮೀನುಗಾರರ ಪತ್ತೆಗೆ ಅಗತ್ಯ ತುರ್ತು ಕ್ರಮಕ್ಕೆ ಈಗಾಗಲೇ ನಿರ್ದೇಶಿಸಲಾಗಿದೆ.

ಮುಂದುರಿದು ಮೀನುಗಾರ ಕುಟುಂಬಕ್ಕೆ ಮೀನುಗಾರಿಕೆ ಇಲಾಖೆಯ ಸಂಕಷ್ಟ ಪರಿಹಾರ ನಿಧಿಯಡಿ ಅಗತ್ಯ ಪರಿಹಾರ ಒದಗಿಸಲು ಶಾಸಕರಾದ ಯಶ್ ಪಾಲ್ ಸುವರ್ಣ ಸಹಿತ ಜಿಲ್ಲೆಯ ಶಾಸಕರ ಮೂಲಕ ಮೀನುಗಾರಿಕೆ ಇಲಾಖೆ ಸಚಿವರೊಂದಿಗೆ ಮಾತುಕತೆ ನಡೆಸಲಾಗಿದೆ. ಇಲಾಖೆಯಿಂದ ಕುಟುಂಬಕ್ಕೆ ತಲಾ 10 ಲಕ್ಷ ರೂ.ಗಳ ಪರಿಹಾರವನ್ನು ತುರ್ತಾಗಿ ಒದಗಿಸುವ ವ್ಯವಸ್ಥೆ ಆಗಿದೆ.
ಮಳೆಗಾಲದಲ್ಲಿ ಸಮುದ್ರದ ಅಲೆಗಳ ಅಬ್ಬರವೂ ಜೋರಾಗಿರುತ್ತದೆ. ಹೀಗಾಗಿ ನಾಡದೋಣಿ, ಟ್ರಾಲ್ ದೋಣಿ ಮೀನುಗಾರರು ವಿಶೇಷ ಎಚ್ಚರಿಕೆ ವಹಿಸಬೇಕು ಮತ್ತು ಲೈಫ್ ಜಾಕೇಟ್ ಬಳಸುವುದನ್ನು ಆದಷ್ಟು ಕಡ್ಡಾಯ ಮಾಡಿಕೊಳ್ಳುವುದು ಉತ್ತಮ. ಲೈಫ್ ಜಾಕೇಟ್ ಬಳಸುವುದರಿಂದ ಜೀವ ಹಾನಿ ತಪ್ಪಿಸಲು ಸಾಧ್ಯವಿದೆ ಎಂದು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.


















