ಹೋರಾಟ ಸಮಿತಿ ಸದಸ್ಯರಿಂದ ಉರುಳು ಸೇವೆ ಮಾಡಿ ಪ್ರತಿಭಟನೆ

ಮಂಜೇಶ್ವರ: ಅಂಡರ್‌ಪಾಸ್ ನಿರ್ಮಿಸಬೇಕೆಂಬ ಜನರ ಬೇಡಿಕೆ ಈಡೇರದಿರುವುದನ್ನು ವಿರೋಧಿಸಿ ಮಂಜೇಶ್ವರ ರಾಷ್ಟ್ರೀಯ ಹೆದ್ದಾರಿ ಕ್ರಿಯಾ ಸಮಿತಿಯ ನೇತೃತ್ವದಲ್ಲಿ ಮೂರು ತಿಂಗಳಿಗೂ ಹೆಚ್ಚು ಕಾಲದಿಂದ ನಡೆಯುತ್ತಿರುವ ಅನಿರ್ದಿಷ್ಟಾವಧಿ ಧರಣಿಯ 100ನೇ ದಿನಕ್ಕೆ ಕಾಲಿಟ್ಟ ಹಿನ್ನೆಲೆಯಲ್ಲಿ ಹೋರಾಟ ಸಮಿತಿ ಸದಸ್ಯರು ಉರುಳು ಸೇವೆ ಮಾಡಿ ಪ್ರತಿಭಟನೆ ನಡೆಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.ನ್ಯಾಯವಾದ ಬೇಡಿಕೆಯನ್ನು ಈಡೇರಿಸಲು ಅಧಿಕಾರಿಗಳು ಹಿಂದೇಟು ಹಾಕುತ್ತಿರುವುದಾಗಿ ಪ್ರತಿಭಟನಾ ನಿರತರು ಆರೋಪಿಸಿದರು.ಮಂಜೇಶ್ವರದ ಇತಿಹಾಸದಲ್ಲಿ ಸತತವಾಗಿ ಪ್ರತಿಭಟನೆ 100 ನೇ ದಿನಕ್ಕೆ ಕಾಲಿಟ್ಟಿರುವುದು ಇದೇ ಪ್ರಥಮವಾಗಿದೆ.

protest

ಈ ಬಗ್ಗೆ ಊರವರು ಹಾಗೂ ಕ್ರಿಯಾಸಮಿತಿ ಜಿಲ್ಲಾಧಿಕಾರಿಯವರನ್ನು ಕಂಡು ಸ್ಥಿತಿಗತಿಗಳನ್ನು ಮನದಟ್ಟು ಮಾಡಿ ಕೊಡಿದ್ದಾರೆ. ಕಳೆದ 3 ತಿಂಗಳಿನಿಂದ ಇಲ್ಲಿಯ ಸ್ಥಳೀಯರು ಮಳೆ ಬಿಸಿಲನ್ನು ಲೆಕ್ಕಿಸದೆ ಪ್ರತಿಭಟನೆ ನಡೆಸುತಿದ್ದರೂ ಸಂಬAಧಪಟ್ಟವರು ಜಾಣ ಕುರುಡುತನ ಪ್ರದರ್ಶಿಸುತ್ತಿರುವುದಾಗಿ ಕ್ರಿಯಾ ಸಮಿತಿ ಆರೋಪಿಸಿದೆ ಬೇಡಿಕೆ ಈಡೇರುವ ತನಕ ಪ್ರತಿಭಟನೆ ಮುಂದುವರಿಯಲಿರುವುದಾಗಿ ಹೋರಾಟ ಕ್ರಿಯಾ ಸಮಿತಿ ತಿಳಿಸಿದೆ.

govt women polytechnic

Related Posts

Leave a Reply

Your email address will not be published.