ಉರ್ವ : ಗೋಡೆ ಕುಸಿತ ಕಾರ್ಮಿಕ ಸಾವು

ಬಿ.ನಾರಾಯಣ ನಾಯಕ್ ಎಂಬುವರ ಮನೆಯ ಸಮೀಪ ಒಂದು ವಾರದಿಂದ ಚರಂಡಿ ನಿರ್ಮಾಣ ಕಾಮಗಾರಿ ನಡೆಯುತ್ತಿತ್ತು. ಆವರಣ ಗೋಡೆ ಕುಸಿಯುವ ಸಾಧ್ಯತೆಯನ್ನು ಮನೆಯ ಮಾಲೀಕರು ಗುತ್ತಿಗೆದಾರರ ಗಮನಕ್ಕೆ ತಂದಿದ್ದರೂ ಮುಂಜಾಗ್ರತಾ ಕ್ರಮ ಕೈಗೊಳ್ಳದೆ ಕಾಮಗಾರಿ ಮುಂದುವರಿಸಲಾಗಿತ್ತು ಎನ್ನಲಾಗಿದೆ.
ಗುರುವಾರ ಬೆಳಿಗ್ಗೆ ಐವರು ಕಾರ್ಮಿಕರು ಕೆಲಸ ಮಾಡುತ್ತಿದ್ದಾಗ ಈರಪ್ಪ ಅವರ ಮೇಲೆ ಗೋಡೆ ಬಿದ್ದಿದೆ. ಗಂಭೀರ ಗಾಯಗೊಂಡ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ದಾರಿಮಧ್ಯೆ ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲ್ಲೂಕಿನ ಈರಪ್ಪ ಪ್ರಾಣ nಕೊನೆಯುಸಿರೆಳೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಗುತ್ತಿಗೆದಾರರ ವಿರುದ್ಧ ಪ್ರಕರಣ ದಾಖಲಾಗಿದೆ.
