HomeFresh Newsಸೈಂಟ್ ಜೋನ್ಸ್ ಪ್ರೌಢಶಾಲೆಯಲ್ಲಿ 15ನೇ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮದ ಸಮಾರೋಪ

ಸೈಂಟ್ ಜೋನ್ಸ್ ಪ್ರೌಢಶಾಲೆಯಲ್ಲಿ 15ನೇ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮದ ಸಮಾರೋಪ

ಕಾಪು: ಸೈಂಟ್ ಜೋನ್ಸ್ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿದ್ದ 15ನೇ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮದ ಸಮಾರೋಪ ಸಮಾರಂಭ ನಡೆಯಿತು.
ಜಿಲ್ಲಾ ವೇದಿಕೆಯ ನಿಕಟಪೂರ್ವ ಅಧ್ಯಕ್ಷರಾದ ನವೀನ್ ಅಮೀನ್ ಶಂಕರಪುರ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ, ವಿದ್ಯಾರ್ಥಿಗಳಿಗೆ ಶುಭಹಾರೈಸಿದರು.
ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ರಾಕೇಶ್ ಕುಂಜೂರು ಅವರು “ದುಶ್ಚಟಮುಕ್ತ ಸಮಾಜ ನಿರ್ಮಾಣದಲ್ಲಿ ವಿದ್ಯಾರ್ಥಿಗಳ ಪಾತ್ರ” ಎಂಬ ವಿಷಯದ ಕುರಿತು ಮಾಹಿತಿ ನೀಡಿದರು. ವಿದ್ಯಾರ್ಥಿಗಳು ದುಶ್ಚಟಗಳಿಂದ ದೂರವಿದ್ದು, ಆರೋಗ್ಯಕರ ಹಾಗೂ ಜವಾಬ್ದಾರಿಯುತ ಜೀವನಶೈಲಿಯನ್ನು ಅಳವಡಿಸಿಕೊಳ್ಳುವಂತೆ ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯ ಶಿಕ್ಷಕರಾದ ಅಶ್ವಿನ್ ರೋಡ್‌ವಿಗಸ್, ತಾಲೂಕು ವೇದಿಕೆ ಪದಾಧಿಕಾರಿ ಭುವನೇಶ್ ಕುರ್ಕಲ್, ತಾಲೂಕು ಯೋಜನಾಧಿಕಾರಿ ಮಮತಾ, ವಲಯ ಮೇಲ್ವಿಚಾರಕಿ ಸರಿತಾ, ಸೇವಾ ಪ್ರತಿನಿಧಿ ಸುನಂದ ಸೇರಿದಂತೆ ಶಾಲಾ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments