HomeFresh Newsವಾಲ್ಪಾಡಿ : ಕಾಲು ಜಾರಿ ನೀರಿಗೆ ಬಿದ್ದ ವ್ಯಕ್ತಿ : ಹುಡುಕಾಟಕ್ಕೆ ನೀರಿಗಿಳಿದ ಈಶ್ವರ್...

ವಾಲ್ಪಾಡಿ : ಕಾಲು ಜಾರಿ ನೀರಿಗೆ ಬಿದ್ದ ವ್ಯಕ್ತಿ : ಹುಡುಕಾಟಕ್ಕೆ ನೀರಿಗಿಳಿದ ಈಶ್ವರ್ ಮಲ್ಪೆ

ಮೂಡುಬಿದಿರೆ : ಕಳೆದ ಎರಡು ದಿನಗಳ ಹಿಂದೆ ವಾಲ್ಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಜೋಗೊಟ್ಟು ಎಂಬಲ್ಲಿ ಆನೆಗುಡ್ಡೆಯ ಗುರುಪ್ರಸಾದ್ ಕಾಲು ಜಾರಿ ನೀರಿಗೆ ಬಿದ್ದು ಕೊಚ್ಚಿಕೊಂಡು ಹೋಗಿದ್ದು ಇನ್ನೂ ಪತ್ತೆಯಾಗದ ಹಿನ್ನೆಲೆಯಲ್ಲಿ ಈಜು ತಜ್ಞ ಈಶ್ವರ್ ಮಲ್ಪೆ ಅವರನ್ನು ಕರೆಸಿಕೊಂಡಿದ್ದು ಅವರು ನೀರಿಗಿಳಿದು ಹುಡುಕಾಟವನ್ನು ಆರಂಭಿಸಿದ್ದಾರೆ.

ಜೋಗೊಟ್ಟು ಬಳಿಯ ಪಡ್ಡಾಯಿಮಜಲು ಎಂಬಲ್ಲಿರುವ ಅಣೆಕಟ್ಟಿನಲ್ಲಿ ನೀರು ತುಂಬಿಕೊಂಡಿತ್ತು ಅದರ ಹಲಗೆಯನ್ನು ತೆಗೆಯಲೆಂದು ಗುರುಪ್ರಸಾದ್ ಅವರು ಕೆಳಗಿಳಿಯುತ್ತಿದ್ದ ಸಂದಭ೯ದಲ್ಲಿ ಕಾಲು ಜಾರಿ ನೀರಿಗೆ ಬಿದ್ದಿದ್ದರು.
ಅಗ್ನಿಶಾಮಕ ಇಲಾಖೆಯ ಸಿಬ್ಬಂದಿಯವರು ಶುಕ್ರವಾರದಿಂದ ಶೋಧನಾ ಕಾರ್ಯ ನಡೆಸಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments