ವಾಮಂಜೂರು : ಶಾರದೋತ್ಸವದ ಫ್ಲೆಕ್ಸ್‍ಗೆ ಹಾನಿ ವಿಚಾರ ಮೂವರು ವಶಕ್ಕೆ

ವಾಮಂಜೂರು ಜಂಕ್ಷನ್ ಆಸುಪಾಸಿನಲ್ಲಿ ಶಾರದೋತ್ಸವ ಬಗ್ಗೆ ವಾಮಂಜೂರು ಫ್ರೆಂಡ್ಸ್ ಎಂಬ ಸಂಘಟನೆಯು ಸಾರ್ವಜನಿಕ ಸ್ಥಳದಲ್ಲಿ ಹಾಕಲಾಗಿದ್ದ ಫ್ಲೆಕ್ಸ್‍ಗಳನ್ನು ಯಾರೋ ಕಿಡಿಗೇಡಿಗಳು ಹರಿದು ಹಾಕಿದ್ದರ ಬಗ್ಗೆ ಮಂಗಳೂರು ಗ್ರಾಮಾಂತರ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿತರಾದ ಸುಮಿತ್ ಹೆಗ್ಡೆ, ಯತೀಶ್ ಪೂಜಾರಿ, ಪ್ರವೀಣ್ ಪೂಜಾರಿ ಎಂಬವರುಗಳನ್ನು ವಶಕ್ಕೆ ಪಡೆಯಲಾಗಿದ್ದು, ಕೃತ್ಯಕ್ಕೆ ಉಪಯೋಗಿಸಿದ ಸ್ವಿಫ್ಟ್ ಕಾರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

Related Posts

Leave a Reply

Your email address will not be published.