ಬಂಟಕಲ್: ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಸಿವಿಲ್ ಇಂಜಿನಿಯರಿಂಗ್ ವಿಭಾಗದ ಅಂತಿಮ ವರ್ಷದ ವಿದ್ಯಾರ್ಥಿ ವೇದಾಂತ್ ಆಚಾರ್ಯ ಅವರು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ರಾಜ್ಯ ಮಟ್ಟದ ಅಂತರ್ ಕಾಲೇಜು ಕುಸ್ತಿ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದು ಸಾಧನೆ ಮಾಡಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದಲ್ಲಿರುವ ಕೆ.ಎಲ್.ಎಸ್. ವಿಶ್ವನಾಥ್ ರಾವ್ ದೇಶಪಾಂಡೆ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಅಕ್ಟೋಬರ್ 5 ಮತ್ತು 6ರಂದು ನಡೆದ ರಾಜ್ಯ ಮಟ್ಟದ ಅಂತರ್ ಕಾಲೇಜು ಕುಸ್ತಿ ಪಂದ್ಯಾವಳಿಯಲ್ಲಿ ವೇದಾಂತ್ ಆಚಾರ್ಯ ಅವರು ಚಿನ್ನದ ಪದಕ ಪಡೆದುಕೊಂಡಿದ್ದಾರೆ.
ವಿದ್ಯಾರ್ಥಿಯ ಈ ಗಮನಾರ್ಹ ಸಾಧನೆಗೆ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ದೈಹಿಕ ಶಿಕ್ಷಣ ನಿರ್ದೇಶಕರು ಹರ್ಷ ವ್ಯಕ್ತಪಡಿಸಿ, ಅಭಿನಂದನೆ ಸಲ್ಲಿಸಿದ್ದಾರೆ.


