ಇಂದು ಹೋಕ್ಕಾಡಿಗೋಳಿ ವೀರ-ವಿಕ್ರಮ ಜೋಡುಕರೆ ಬಯಲು ಕಂಬಳ

ಮೂಡುಬಿದಿರೆ : ಮಹಿಷಮರ್ಧಿನಿ ಕಂಬಳ ಸಮಿತಿ ಇದರ ವತಿಯಿಂದ ನಡೆಯುವ ಇತಿಹಾಸ ಪ್ರಸಿದ್ಧ ಹೋಕ್ಕಾಡಿಗೋಳಿ ವೀರ-ವಿಕ್ರಮ ಜೋಡುಕರೆ ಬಯಲು ಕಂಬಳವು ಶನಿವಾರ ಬೆಳಿಗ್ಗೆ ಆರಂಭಗೊಂಡಿತು.

veera vikrama jodu kere kambala

ನೋಣಾಲ್ ಗುತ್ತು ರಶ್ಮಿತ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಈ ಕಂಬಳವನ್ನು ಶ್ರೀ ಕ್ಷೇತ್ರ ಪೂಂಜದ ಅಸ್ರಣ್ಣ ಕೃಷ್ಣ ಪ್ರಸಾದ್ ಆಚಾರ್ಯ ಕಂಬಳದ ಕರೆಯಲ್ಲಿ ದೀಪ ಬೆಳಗಿಸಿ, ತೆಂಗಿನ ಕಾಯಿ ಹೊಡೆಯುವ ಮೂಲಕ ಉದ್ಘಾಟಿಸಿದರು.

veera vikrama jodu kere kambala

ನಂತರ ಮಾತನಾಡಿದ ಅವರು ಆಧುನಿಕ ಕಾಲದಲ್ಲಿರುವ ನಾವು ಈ ಹಿಂದೆ ಇದ್ದ ಕೆಲವು ಗ್ರಾಮೀಣ ಕ್ರೀಡೆಗಳನ್ನು ಮರೆತಿದ್ದೇವೆ ಮತ್ತು ಅವುಗಳ ಅವನತಿಗೆ ಕಾರಣರಾಗಿದ್ದೇವೆ. ಆದರೆ ತುಳುನಾಡಿನ ಸಂಸ್ಕೃತಿಯನ್ನು ಬಿಂಬಿಸುವ ಜಾನಪದ ಕ್ರೀಡೆ ಕಂಬಳವನ್ನು ಯುವ ಜನತೆ ಪ್ರೋತ್ಸಾಹಿಸುತ್ತಿರುವುದು ಉತ್ತಮ ಬೆಳವಣಿಗೆ ಎಂದರು.

ಸಿದ್ದಕಟ್ಟೆ ಸಿ.ಎ.ಬ್ಯಾಂಕಿನ ಅಧ್ಯಕ್ಷ ಪ್ರಭಾಕರ ಪ್ರಭು, ವೈದ್ಯ ಡಾ.ಸುದೀಪ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಶುಭ ಹಾರೈಸಿದರು. ಸಮಿತಿಯ ಗೌರವವಾಧ್ಯಕ್ಷ ಸಂಜೀವ ಶೆಟ್ಟಿ ಗುಂಡ್ಯಾರು, ಪ್ರಧಾನ ಸಂಚಾಲಕ ರಾಜೇಶ್ ಶೆಟ್ಟಿ ಕೊನೆರೊಟ್ಟು, ಸಂಘಟನಾ ಕಾರ್ಯದರ್ಶಿ ಹರಿಪ್ರಸಾದ್ ಕುರುಡಾಡಿ ಈ ಸಂದರ್ಭದಲ್ಲಿದ್ದರು.ಸಮಿತಿಯ ಅಧ್ಯಕ್ಷ ರಶ್ಮಿತ್ ಶೆಟ್ಟಿ ಸ್ವಾಗತಿಸಿದರು. ಗೌರವ ಸಲಹೆಗಾರ , ನೋಟರಿ ಮತ್ತು ವಕೀಲ ಸುರೇಶ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.ಪ್ರಧಾನ ಕಾರ್ಯದರ್ಶಿ ಸಂದೇಶ್ ಶೆಟ್ಟಿ ಪೋಡುಂಬ ವಂದಿಸಿದರು.

Related Posts

Leave a Reply

Your email address will not be published.