ಡಾ. ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮ ಉಡುಪಿ ಜಿಲ್ಲೆ ವತಿಯಿಂದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ಶಿಫಾರಸ್ಸಿನ ಮೇರೆಗೆ ಸ್ವಾವಲಂಬಿ ಸಾರಥಿ ಯೋಜನೆಯಡಿ ಗೂಡ್ಸ್ ವಾಹನ ಮಂಜೂರಾಗಿದ್ದು ಕಾಪು ತಾಲೂಕು ಪಂಚಾಯತ್ ಕಟ್ಟಡದ ಬಳಿ ಫಲಾನುಭವಿಗಳಿಗೆ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ವಿತರಿಸಿದರು.
ಸ್ವಾವಲಂಬಿ ಸಾರಥಿ ಯೋಜನೆಯಡಿ ಎರ್ಮಾಳು ಗ್ರಾಮದ ಸುಜೀಂದ್ರ, ಕಟಪಾಡಿ ಏಣಗುಡ್ಡೆ ಗ್ರಾಮದ ಸೂರಜ್ ಅವರಿಗೆ ಸೇರಿದಂತೆ ಒಟ್ಟು 2 ಫಲಾನುಭವಿಗಳಿಗೆ ಗೂಡ್ಸ್ ವಾಹನ ವಿತರಿಸಲಾಯಿತು.
ಈ ಸಂದರ್ಭದಲ್ಲಿ ಕಾಪು ತಹಶೀಲ್ದಾರರಾದ ಅಂನತ ಶಂಕರ್, ಕಾಪು ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಗಳಾದ ವಿಜಯ್ ಕುಮಾರ್, ಅಂಬೇಡ್ಕರ್ ಅಭಿವೃದ್ಧಿ ನಿಗಮದ ವ್ಯವಸ್ಥಾಪಕರಾದ ಶಂಕರ್ ಉಪಸ್ಥಿತರಿದ್ದರು.
