ಸಚಿವರಾದ ಎಸ್.ಅಂಗಾರರಿಗೆ ಟಿಕೆಟ್ ತಪ್ಪಿದ ಹಿನ್ನೆಲೆ : ವೆಂಕಟ್ ವಳಲಂಬೆ ರಾಜೀನಾಮೆ

ಕಳೆದ 30 ವರ್ಷಗಳ ಕಾಲ ಕ್ಷೇತ್ರ ಮತ್ತು ಪಕ್ಷಕ್ಕೆ ಯಾವುದೇ ಚ್ಯುತಿ ಬಾರದ ರೀತಿ ದುಡಿದ ಸಾಮಾನ್ಯ ಮನೆತನದಿಂದ ಬಂದಿರುವ ಸರಳ ಸಜ್ಜನಿಕೆಯ ಎಲ್ಲರ ಜನಮನ ಗೆದ್ದಿರುವ ಪಕ್ಷಾತೀತವಾಗಿ ಕ್ಷೇತ್ರದ ಅಭಿವೃದ್ಧಿಯನ್ನು ಮಾಡಿರುವ ಶ್ರೀ ಎಸ್.ಅಂಗಾರರಂತಹ ಪ್ರಾಮಾಣಿಕ ಕಾರ್ಯಕರ್ತನೊಂದಿಗೆ ಚರ್ಚಿಸದೆ ಏಕಪಕ್ಷೀಯವಾಗಿ ಅಭ್ಯರ್ಥಿ ಘೋಷಣೆ ಮಾಡಿರುವುದರಿಂದ ನನ್ನ ಮನಸ್ಸಿಗೆ ತುಂಬಾ ನೋವಾಗಿರುತ್ತದೆ. ಆದುದರಿಂದ ನನ್ನ ಪಾರ್ಟಿಯ ಜಿಲ್ಲಾ ಉಪಾಧ್ಯಕ್ಷ ಸ್ಥಾನಕ್ಕೆ ಈ ಕ್ಷಣದಿಂದಲೇ ರಾಜೀನಾಮೆ ನೀಡಿರುತ್ತೇನೆ ಎಂದು ಜಿಲ್ಲಾ ಅಧ್ಯಕ್ಷರಾದ ಶ್ರೀ ಸುದರ್ಶನ ಮೂಡುಬಿದಿರೆ ಇವರಿಗೆ ರಾಜೀನಾಮೆ ಸಲ್ಲಿಸಿರುತ್ತೇನೆ ಎಂದು ತಿಳಿಸಿದ್ದಾರೆ‌.

Related Posts

Leave a Reply

Your email address will not be published.