ಶ್ರೀ ವೆಂಕಟರಮಣ ದೇವಸ್ಥಾನ ಆಡಳಿತ ಮಂಡಳಿ ಟ್ರಸ್ಟಿಗಳ ವಿರುದ್ಧ ಜಾಲತಾಣಗಳಲ್ಲಿ ಸುಳ್ಳು ಮಾಹಿತಿ ಆರೋಪ : ಸೈಬರ್ ಪೊಲೀಸ್ ಠಾಣೆಯಲ್ಲಿ ದೂರು
ಮಂಗಳೂರಿನ ಇತಿಹಾಸ ಪ್ರಸಿದ್ಧ ಶ್ರೀ ವೆಂಕಟರಮಣ ದೇವಸ್ಥಾನ ಮತ್ತು ಆಡಳಿತ ಮಂಡಳಿ ಟ್ರಸ್ಟಿಗಳ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಮಾಹಿತಿ ಮತ್ತು ಆರೋಪ ಹೊರಿಸಿರುವ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸಬೇಕು ಎಂದು ಸೈಬರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.ದೇವಸ್ಥಾನದ ಮ್ಯಾನೇಜಿಂಗ್ ಟ್ರಸ್ಟಿ ಅಡಿಗೆ ಬಾಲಕೃಷ್ಣ ಶೆಣೈ, ಟ್ರಸ್ಟಿಗಳಾದ ಸಾಹುಕಾರ ಕಿರಣ್ ಪೈ, ಸತೀಶ್ ಪ್ರಭು, ಗಣೇಶ್ ಕಾಮತ್ ಮತ್ತು ಜಗನ್ನಾಥ್ ಕಾಮತ್ ಈ ದೂರು ದಾಖಲಿಸಿದ್ದಾರೆ. ಆರೋಪಿಗಳನ್ನು ತಕ್ಷಣ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.