HomeFresh Newsಹಿರಿಯ ನಟ ಎಂ.ಎಸ್.ಉಮೇಶ್ ನಿಧನ

ಹಿರಿಯ ನಟ ಎಂ.ಎಸ್.ಉಮೇಶ್ ನಿಧನ

ಕನ್ನಡ ಚಿತ್ರರಂಗದ ಹಿರಿಯ ನಟ ಎಂ.ಎಸ್. ಉಮೇಶ್  ಅವರು ನಿಧನರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಅವರಿಗೆ ತೀವ್ರ ಅನಾರೋಗ್ಯ ಉಂಟಾಗಿತ್ತು. ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ಫಲಕಾರಿ ಆಗದೇ ಅವರು ಮೃತರಾಗಿದ್ದಾರೆ. ಉಮೇಶ್ ಅವರು ಆಸ್ಪತ್ರೆಗೆ ದಾಖಲಾಗಿದ್ದಾಗ ಅನೇಕ ಕಲಾವಿದರು ಹೋಗಿ ಮಾತನಾಡಿಸಿದ್ದರು. ಅವರು ಬೇಗ ಗುಣಮುಖರಾಗಲಿ ಎಂದು ಪ್ರಾರ್ಥಿಸಿದ್ದರು. ಆದರೆ ಪ್ರಾರ್ಥನೆ ಫಲಿಸಿಲ್ಲ. ಚಿಕಿತ್ಸೆ ಫಲಕಾರಿ ಆಗದೇ ಎಂ.ಎಸ್. ಉಮೇಶ್ ಅವರು ನಿಧನರಾಗಿದ್ದಾರೆ. ಅವರಿಗೆ 80 ವರ್ಷ ವಯಸ್ಸಾಗಿತ್ತು.

ಉಮೇಶ್ ಇತ್ತೀಚೆಗೆ ಮನೆಯಲ್ಲೇ ಕಾಲುಜಾರಿ ಬಿದ್ದು ಆಸ್ಪತ್ರೆಗೆ ದಾಖಲಾಗಿದ್ದರು. ಪರೀಕ್ಷೆಯ ವೇಳೆ ಅವರಿಗೆ 4ನೇ ಹಂತದ ಲಿವರ್ ಕ್ಯಾನ್ಸರ್ ಇರುವುದು ಪತ್ತೆಯಾಗಿತ್ತು.

ಎಪ್ರಿಲ್ 22, 1945ರಲ್ಲಿ ಮೈಸೂರಿನಲ್ಲಿ ಜನಿಸಿದ ಎಂ. ಎಸ್. ಉಮೇಶ್ 1960ರ ದಶಕದಿಂದಲೂ ಕನ್ನಡ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ. ಇತ್ತೀಚಿನ ದಿನಗಳ ತನಕವೂ ಅವರು ಸಿನೆಮಾಗಳಲ್ಲಿ ನಟಿಸುತ್ತಿದ್ದರು. ಉಮೇಶ್ ಅಭಿನಯಿಸಿದ್ದ ‘ಕಮಲ್ ಶ್ರೀದೇವಿ’, ‘ಐ ಆ್ಯಮ್ ಗಾಡ್’ ಸಿನೆಮಾಗಳು ಇತ್ತೀಚೆಗೆ ಬಿಡುಗಡೆ ಆಗಿದ್ದವು. ಪೋಷಕ ಪಾತ್ರಗಳು ಹಾಗೂ ಹಾಸ್ಯ ಪಾತ್ರಗಳ ಮೂಲಕ ಅವರು ಜನಪ್ರಿಯತೆ ಪಡೆದಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments