ಬಿವಂಡಿ ಕ್ಷೇತ್ರದ ಉಸ್ತುವಾರಿಯಾಗಿ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಆಯ್ಕೆ
ಮುಂಬೈ:ಲೋಕಸಭಾ ಉಪಚುನಾವಣೆ ಸಲುವಾಗಿ ಬಿವಂಡಿ ಕ್ಷೇತ್ರದ ಉಸ್ತುವಾರಿಯಾಗಿ ಕರ್ನಾಟಕ ರಾಜ್ಯದ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಆಯ್ಕೆಯಾಗಿದ್ದಾರೆ.
ಇಂದು ಅವರು ಬಿವಂಡಿ ಜಿಲ್ಲಾ ಕಾಂಗ್ರೆಸ್ ಕಛೇರಿಗೆ ಭೇಟಿ ನೀಡಿ ಚುನಾವಣಾ ಪೂರ್ವ ತಯಾರಿಯಾ ಬಗ್ಗೆ ಜಿಲ್ಲಾ ಅಧ್ಯಕ್ಷ ರಶೀದ್ ತಾಯಿರ್ ಮೊಮಿನ್ ಹಾಗೂ ಪಕ್ಷದ ಪ್ರಮುಖ ನಾಯಕರ ಜೊತೆ ಚರ್ಚಿಸಿದ್ದಾರೆ. ಈ ಸಂದರ್ಭ ಪಕ್ಷದ ಮುಖಂಡರು ಐವನ್ ಡಿಸೋಜರವರನ್ನು ಆತ್ಮೀಯವಾಗಿ ಗೌರವ ಪೂರ್ವಕವಾಗಿ ಸ್ವಾಗತಿಸಿದರು.