ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಪ್ರಸನ್ನ ಕುಮಾರ್ ಮಾರ್ತಾರನ್ನು ಭೇಟಿಯಾದ ವಿಧಾನ ಪರಿಷತ್ ಶಾಸಕ ಕಿಶೋರ್ ಕುಮಾರ್ ಪುತ್ತೂರು
ಪುತ್ತೂರು : ಮಾಜಿ ಪುತ್ತಿಲ ಪರಿವಾರದ ಅಧ್ಯಕ್ಷ, ಪ್ರಸ್ತುತ ದಕ್ಷಿಣ ಕನ್ನಡ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಪ್ರಸನ್ನ ಮಾರ್ತಾರನ್ನು ಭಾನುವಾರ ನಡೆದ ಪುತ್ತಿಲ ಪರಿವಾರ ನೇತೃತ್ವದ ಶ್ರೀನಿವಾಸ ಕಲ್ಯಾಣಕ್ಕೆ ಹೋದ ಸಂದರ್ಭದಲ್ಲಿ ಅವರನ್ನು ಕಾರ್ಯಕ್ರಮಕ್ಕೆ ಹೋಗದಂತೆ ಕಾರ್ಯಕರ್ತರು ತಡೆದ ಘಟನೆ ನಡೆದಿತ್ತು.
ಇದೀಗ ಕರ್ನಾಟಕ ವಿಧಾನ ಪರಿಷತ್ ಶಾಸಕರಾದ ಕಿಶೋರ್ ಕುಮಾರ್ ಪುತ್ತೂರು ರವರು ಭೇಟಿ ನೀಡಿ ಪ್ರಸನ್ನ ಕುಮಾರ್ ಮಾರ್ತಾ ರಿಗೆ ಸಾಂತ್ವನ ಹೇಳಿದ್ದಾರೆ.ಸಂದರ್ಭದಲ್ಲಿ ಪುತ್ತೂರು ನಗರ ಮಂಡಲ ಅಧ್ಯಕ್ಷ ಶಿವಕುಮಾರ್ ಕಲ್ಲಿಮಾರ್, ಪ್ರಧಾನ ಕಾರ್ಯದರ್ಶಿ ಶಶಿಧರ್ ನಾಯಕ್, ನಾಗೇಂದ್ರ ಬಾಳಿಗ ಮತ್ತು ಪಕ್ಷದ ಪ್ರಮುಖರು ಉಪಸ್ಥಿತರಿದ್ದರು


















