ವಿಜಯಕುಮಾರ್ ಹೆಬ್ಬಾರಬೈಲು ಅವರಿಗೆ”ಗಡಿನಾಡ ಧ್ವನಿ ಮಾಧ್ಯಮ ರಾಜ್ಯ ಪ್ರಶಸ್ತಿ “

ಪುತ್ತೂರು : ಕವಿ, ಪತ್ರಕರ್ತ ವಿಜಯಕುಮಾರ್ ಭಂಡಾರಿ ಹೆಬ್ಬಾರಬೈಲು ಅವರ ಸಂಪಾದಕತ್ವದ “ಪೂವರಿ” ತುಳು ಪತ್ರಿಕಾ ಕ್ಷೇತ್ರದಲ್ಲಿ ನಾಡಿಗೆ ಸಲ್ಲಿಸಿದ ಅನುಪಮ ಸಾಧನೆಗಾಗಿ ಆರನೇ ಕರ್ನಾಟಕ ಗಡಿನಾಡ ಸಮ್ಮೇಳನ – 2023ರ “ಗಡಿನಾಡ ಧ್ವನಿ ಮಾಧ್ಯಮ ರಾಜ್ಯ ಪ್ರಶಸ್ತಿ”ಯನ್ನು ಒಡ್ಯ ಸರಕಾರಿ ಶಾಲಾ ವಠಾರದಲ್ಲಿ ಜರಗಿದ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಪಡಕೊಂಡಿದೆ.

ತುಳುನಾಡಿನಲ್ಲಿ ಕಳೆದ ಎಂಟು ವರ್ಷಗಳಿಂದ ಸದ್ದು ಮಾಡುತ್ತಿರುವ ತುಳು ಭಾಷೆಯ ಏಕೈಕ ತುಳು ಮಾಸಿಕ “ಪೂವರಿ” ಇತ್ತೀಚೆಗೆ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ, ಒಡಿಯೂರು ತುಳು ಸಾಹಿತ್ಯ ಸಮ್ಮೇಳನದ ಪ್ರಶಸ್ತಿ ಸಹಿತ ಅನೇಕ ಮಾಧ್ಯಮ ಪ್ರಶಸ್ತಿಗಳ ಸರಮಾಲೆಯನ್ನೇ ಹೆಗಲಿಗೆ ಹಾಕಿಕೊಂಡಿದೆ.

ಗಡಿನಾಡ ಶ್ರೇಯೋಭಿವೃದ್ಧಿ ಟ್ರಸ್ಟ್ (ರಿ.), ಗಡಿನಾಡ ಧ್ವನಿ ಮಾಸಿಕ ಹಾಗೂ ವಿವಿಧ ಸಂಘ ಸಂಸ್ಥೆಗಳ ಜಂಟಿ ಸಹಕಾರದಲ್ಲಿ ಆಯೋಜಿಸಿದ ಸಮಾರಂಭದಲ್ಲಿ ಸಮ್ಮೇಳನಾಧ್ಯಕ್ಷ ಮಲಾರ್ ಜಯರಾಮ ರೈ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮಿತ್ರಂಪಾಡಿ ಜಯರಾಮ ರೈ ಅಬುಧಾಬಿ, ಸಮ್ಮೇಳನದ ರೂವಾರಿ ಡಾ. ಎಸ್. ಅಬೂಬಕ್ಕರ್ ಆರ್ಲಪದವು, ಕಸಾಪ ಪುತ್ತೂರು ತಾಲೂಕು ಅಧ್ಯಕ್ಷ ಉಮೇಶ್ ನಾಯಕ್, ಡಾ. ಹರ್ಷ ರೈ ಮಾಡಾವು ,ಕೆ. ಈಶ್ಯರ ಭಟ್ ಕಡಂದೇಲು ಸಹಿತ ಅನೇಕ ಗಣ್ಯರು ಉಪಸ್ಥಿತರಿದ್ದರು.

Related Posts

Leave a Reply

Your email address will not be published.