HomeFresh Newsಅಕ್ರಮ ಮರಳುಗಾರಿಕೆ ವಿರುದ್ಧ ಗ್ರಾಮಸ್ಥರ ಪ್ರತಿಭಟನೆ

ಅಕ್ರಮ ಮರಳುಗಾರಿಕೆ ವಿರುದ್ಧ ಗ್ರಾಮಸ್ಥರ ಪ್ರತಿಭಟನೆ

ಬ್ರಹ್ಮಾವರದ ನದಿ ತೀರದ ಸರಕಾರಿ ಜಾಗದಲ್ಲಿ ನಡೆಯುತ್ತಿರುವ ಮರಳುಗಾರಿಕೆ ವಿರುದ್ಧ ಮೂಡುಹೋಳಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ಬ್ರಹ್ಮಾವರ ತಾಲೂಕು ಸೌಧದ ಮುಂದೆ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಅದೇ ಜಾಗದ ಬಳಿ ನೂರಾರು ಎಕ್ರೆ ಕೃಷಿ ಭೂಮಿ ಜಲಾವೃತವಾಗುವ ಭೀತಿ ಎದುರಾಗಿದ್ದು, ಮತ್ತು ಅಲ್ಲಿನ ಪರಿಸರದ ಜನರು ಗೋಮಾಳದಲ್ಲಿ ಹಸುಗಳನ್ನು ಮೇಯಲು ಬಿಟ್ಟಾಗ ಮರಳುಗಾರಿಕೆ ಮಾಡುವವರು ಮಹಿಳೆಯರಿಗೆ ಬೆದರಿಕೆ ಹಾಕುತ್ತಿದ್ದಾರೆ ಎಂದು ಪ್ರತಿಭಟನೆಗೆ ಬಂದ ಮಹಿಳೆಯರು ದೂರಿದ್ದಾರೆ. ಪ್ರತಿಭಟನಾ ಸ್ಥಳಕ್ಕೆ ಬ್ರಹ್ಮಾವರ ತಹಶೀಲ್ದಾರ ಶ್ರೀಕಾಂತ್ ಹೆಗ್ಡೆ ಆಗಮಿಸಿ ಪ್ರತಿಭನಾಕಾರರ ಮನವಿ ಸ್ವೀಕರಿಸಿ ಸೂಕ್ತ ಕ್ರಮ ಕೈಗೊಳ್ಳುವ ಬರವಸೆ ನೀಡಿದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments