ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯಕುಮಾರ್ ಸೊರಕೆ ನಾಮಪತ್ರ ಸಲ್ಲಿಕೆ
ಕಾಪು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ಸಚಿವ ವಿನಯಕುಮಾರ್ ಸೊರಕೆ ಸಹಸ್ರಾರು ಕಾರ್ಯಕರ್ತರೊಂದಿಗೆ ಜಾಥದೊಂದಿಗೆ ತೆರಳಿ ನಾಮಪತ್ರ ಸಲ್ಲಿಸಿದ್ದಾರೆ.ಅಭ್ಯರ್ಥಿ ವಿನಯಕುಮಾರ್ ಸೊರಕೆ ಕಟಪಾಡಿ ವಿಶ್ವನಾಥ ಕ್ಷೇತ್ರ, ಕಾಪು ಮಾರಿಯಮ್ಮ ದೇವಸ್ಥಾನ, ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಗಳಿಗೆ ತೆರಳಿ ಪೂಜೆ ಸಲ್ಲಿಸಿ ಕಾಪು ಜನಾರ್ದನ ದೇವಸ್ಥಾನದಲ್ಲಿ ಅಂತಿಮವಾಗಿ ಪೂಜೆ ಸಲ್ಲಿಸಿ ಐದು ಸಾವಿರಕ್ಕೂ ಅಧಿಕ ಪಕ್ಷದ ಮುಖಂಡರು ಕಾರ್ಯಕರ್ತರೊಂದಿಗೆ ಜಾಥದ ಮೂಲಕ ತೆರಳಿ ಕಾಂಗ್ರೆಸ್ ಕಛೇರಿಯ ಮುಂಭಾಗ ಸಾರ್ವಜನಿಕ ಸಭೆ ನಡೆಸಿ ಬಳಿಕ ನಾಮಪತ್ರ ಸಲ್ಲಿಸಿದ್ದಾರೆ.