ಪಡುಬಿದ್ರಿ ಕಡಲು ಕೊರೆತ ಪ್ರದೇಶಕ್ಕೆ ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಭೇಟಿ
ಮಾಜಿ ಸಚಿವರು ಹಾಗೂ ಕೆ.ಪಿ.ಸಿ.ಸಿ ಉಪಾಧ್ಯಕ್ಷರಾದ ಸನ್ಮಾನ್ಯ ವಿನಯ್ ಕುಮಾರ್ ಸೊರಕೆ ಯವರು, ಇಂದು ಕಡಲ್ಕೊರೆತದಿಂದ ತೀವ್ರ ಹಾನಿಗೊಳಗಾಗಿ, ಅಪಾಯದ ಅಂಚಿಗೆ ತಲುಪಿರುವ ಕಾಡಿಪಟ್ನ – ಪಡುಬಿದ್ರಿ ಬೀಚ್ ಗೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಸಂಬಂಧ ಪಟ್ಟ ಇಲಾಖೆಯ ಅಭಿಯಂತರ ರಿಗೆ ಕರೆ ಮಾಡಿ ತುರ್ತು ಕ್ರಮ ಕೈಗೊಳ್ಳುವಂತೆ ತಿಳಿಸಿದರು.
ಈ ಸಂದರ್ಭ ಮಾಜಿ ಸಚಿವರೊಂದಿಗೆ ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ನವೀನ್ ಚಂದ್ರ ಸುವರ್ಣ, ಪ್ರಧಾನ ಕಾರ್ಯದರ್ಶಿ ಅಮೀರ್ ಕಾಪು, ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಶರ್ಫುದ್ದೀನ್ ಶೇಖ್, ಪಡುಬಿದ್ರಿ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ಕರುಣಾಕರ ಪೂಜಾರಿ, ಅಶೋಕ್ ನಾಯರಿ ರಾಹುಲ್ ಮತ್ತು ಸ್ಥಳೀಯ ನಿವಾಸಿಗಳು ಉಪಸ್ಥಿತರಿದ್ದರು