ಕೊಡಗು ಮತ್ತು ದಕ್ಷಿಣ ಕನ್ನಡ ಗೌಡ ಮಹಿಳಾ ಒಕ್ಕೂಟದ ಉಪಾಧ್ಯಕ್ಷರಾಗಿ ವಿನುತಾ ಪಾತಿಕಲ್ಲು ಆಯ್ಕೆ

ಕೊಡಗು ಮತ್ತು ದಕ್ಷಿಣ ಕನ್ನಡ ಗೌಡ ಮಹಿಳಾ ಒಕ್ಕೂಟ ಮಡಿಕೇರಿ ಎಂಬ ನೂತನ ಸಂಘಟನೆ ಅಸ್ತಿತ್ವಕ್ಕೆ ಬಂದಿದ್ದು, ಇದರ ಉಪಾಧ್ಯಕ್ಷರಾಗಿ ಸುಳ್ಯ ತಾಲೂಕು ಗೌಡರ ಯುವ ಸೇವಾ ಸಂಘದ ಮಹಿಳಾ ಘಟಕದ ಅಧ್ಯಕ್ಷರಾಗಿರುವ ಶ್ರೀಮತಿ ವಿನುತಾ ಹರಿಶ್ಚಂದ್ರ ಪಾತಿಕಲ್ಲು ಆಯ್ಕೆಯಾಗಿದ್ದಾರೆ.
ಸಮಿತಿಯ ಅಧ್ಯಕ್ಷರಾಗಿ ಮೂಟೇರ ಪುಷ್ಪಾವತಿ ರಮೇಶರವರ ನೇತೃತ್ವದಲ್ಲಿ ತಂಡ ರಚನೆಯಾಗಿದೆ. ಶ್ರೀಮತಿ ವಿನುತಾ ಪಾತಿಕಲ್ಲುರವರು ಮಂಡೆಕೋಲು ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ, ಹಾಲಿ ಸದಸ್ಯರಾಗಿದ್ದಾರೆ. ಯುವಜನ ಸಂಯುಕ್ತ ಮಂಡಳಿ ನಿರ್ದೇಶಕರಾಗಿ, ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದಾರೆ.