HomeFresh Newsಶ್ರೀ ಕ್ಷೇತ್ರ ಧರ್ಮಸ್ಥಳ ದೇವಸ್ಥಾನದಿಂದ ಕಳತ್ತೂರು ವಿಶ್ವಕರ್ಮ ಸಮುದಾಯ ಭವನ ನಿರ್ಮಾಣಕ್ಕೆ ಸಹಕಾರ ಕೋರಿದ ವಿಶ್ವಕರ್ಮ...

ಶ್ರೀ ಕ್ಷೇತ್ರ ಧರ್ಮಸ್ಥಳ ದೇವಸ್ಥಾನದಿಂದ ಕಳತ್ತೂರು ವಿಶ್ವಕರ್ಮ ಸಮುದಾಯ ಭವನ ನಿರ್ಮಾಣಕ್ಕೆ ಸಹಕಾರ ಕೋರಿದ ವಿಶ್ವಕರ್ಮ ಸಮಾಜ ಸೇವಾ ಸಂಘ

ಕಳತ್ತೂರು: ವಿಶ್ವಕರ್ಮ ಸಮಾಜ ಸೇವಾ ಸಂಘ (ರಿ.) ಕಳತ್ತೂರು, ದುರ್ಗಾದೇವಿ ಮಂದಿರ ಶಾಂತಿಗುಡ್ಡೆ ಸಮುದಾಯ ಭವನ ಸಮಿತಿಯ ವತಿಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ಡಿ. ವೀರೇಂದ್ರ ಹೆಗಡೆಯವರಿಗೆ ಸಮುದಾಯ ಭವನ ನಿರ್ಮಾಣಕ್ಕೆ ಸಹಕಾರ ನೀಡುವಂತೆ ಮನವಿ ಪತ್ರ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಧರ್ಮಾಧಿಕಾರಿಗಳ ಆಪ್ತ ಕಾರ್ಯದರ್ಶಿ ವೀರಣ್ಣ ಶೆಟ್ಟಿಯವರೊಂದಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ರಿ.) ಪಡುಬಿದ್ರಿ ವಲಯ ಅಧ್ಯಕ್ಷರಾದ ಭುಜಂಗ ಆಚಾರ್ಯ ಪಡುಬಿದ್ರಿ ಅವರ ನೇತೃತ್ವದಲ್ಲಿ ಸಮುದಾಯ ಭವನ ನಿರ್ಮಾಣದ ಕುರಿತು ಮಾತುಕತೆ ನಡೆಯಿತು.
ಬಳಿಕ ನಿಯೋಗವು ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದು ಅನ್ನಪ್ರಸಾದ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಸಮುದಾಯ ಭವನ ಸಮಿತಿಯ ಅಧ್ಯಕ್ಷ ಜನಾರ್ಧನ ಆಚಾರ್ಯ ಮುಕ್ರಗುತ್ತು, ಪ್ರಧಾನ ಕಾರ್ಯದರ್ಶಿ ಹರೀಶ್ ಆಚಾರ್ಯ ಕಳತ್ತೂರು, ಉಚ್ಚಿಲ ವಲಯ ಅಧ್ಯಕ್ಷ ಪ್ರಸಾದ್ ಆಚಾರ್ಯ, ಯುವ ಸಂಘಟನೆಯ ಉಪಾಧ್ಯಕ್ಷ ವಿಜಯ ಆಚಾರ್ಯ ಪಡುಬಿದ್ರಿ ಹಾಗೂ ಸಮುದಾಯ ಭವನ ಸಮಿತಿಯ ಪದಾಧಿಕಾರಿಗಳಾದ ರವೀಂದ್ರ ಆಚಾರ್ಯ, ಗಣೇಶ್ ಆಚಾರ್ಯ ಮತ್ತು ಸುಬ್ರಯ್ಯ ಆಚಾರ್ಯ ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments